ಉಡುಪಿ: ಕರಾವಳಿ ಭಾಗದ ವಿವಿಧ ಸ್ವಾಮೀಜಿಗಳೊಂದಿಗೆ ಪಿ.ನಡ್ದಾ ಸಮಾಲೋಚನೆ

ಉಡುಪಿ, ಫೆ.20: ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಇಂದು ಉಡುಪಿಗೆ ಆಗಮಿಸಿದ್ದು, ಇಲ್ಲಿನ ಪೇಜಾವರ ಮಠದ ರಾಮ ವಿಠಲ ಸಭಾಂಗಣದಲ್ಲಿ ಕರಾವಳಿ ಭಾಗದ ವಿವಿಧ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದರು.
ಸಭೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ, ಮಾಣಿಲ ಸ್ವಾಮೀಜಿ, ಗುರುಪುರ ವಜ್ರಾದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆಯ ಜೈನ ಮಠದ ಸ್ವಾಮೀಜಿ ಮೊದಲಾದವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವರಾದ ಎಸ್.ಅಂಗಾರ, ವಿ.ಸುನೀಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.

Next Story