ಎಸ್‌ಕೆಪಿಎ ಉಡುಪಿ ವಲಯ: ವಿಜ್ಞಾಪನಾ ಪತ್ರ ಬಿಡುಗಡೆ

ಉಡುಪಿ : ಉಡುಪಿ ಜಗನ್ನಾಥ ಸಭಾಭವನದಲ್ಲಿ ನಡೆದ ಉಡುಪಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ವಿಶೇಷ ಸಭೆಯಲ್ಲಿ ಜಿಲ್ಲಾ ಕಟ್ಟಡ ರಚನೆ ಕುರಿತ ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷ ಆನಂದ ಎನ್. ಕುಂಪಲ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿದರು. ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಜನಾರ್ದನ್ ಕೊಡುವೂರು ವಹಿಸಿದ್ದರು. ಸಲಹಾ ಸಮಿತಿ ಮಾಜಿ ಅಧ್ಯಕ್ಷ ವಿಠಲ ಚೌಟ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕರ ಸಾಲಿಯಾನ್, ಜೊತೆ ಕಾರ್ಯದರ್ಶಿ ಅಜಯ್ ಮಂಗಳೂರು, ವಾಮನ ಪಡುಕೆರೆ, ಪತ್ರಿಕಾ ಪ್ರತಿನಿಧಿ ಉಮೇಶ್, ಮಾಜಿ ಕಾರ್ಯದರ್ಶಿ ಹರೀಶ್ ಅಡ್ಯಾರ್ ಭಾಗವಹಿಸಿದ್ದರು.
ಉಪಾಧ್ಯಕ್ಷ ಪ್ರವೀಣ್ ಹೂಡೆ, ಕಟ್ಟಡ ಸಮಿತಿ ಸದಸ್ಯ ಸುಂದರ ಪೂಜಾರಿ ಕೊಳಲಗಿರಿ, ಉಡುಪಿ ವಲಯದ ಮಾಜಿ ಅಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು. ವಲಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕೊರೆಯ ಸ್ವಾಗತಿಸಿದರು. ರಾಘವೇಂದ್ರ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ದಿವಾಕರ್ ಹಿರಿಯಡ್ಕ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸುರಭಿ ಸುಧೀರ್ ಶೆಟ್ಟಿ ವಂದಿಸಿದರು.