ಉಡುಪಿ: ಶ್ರೀರಾಮಸೇನೆ ಸಂಘಟನೆಯ ನಾಲ್ವರು ಮುಖಂಡರ ವಜಾ

ಉಡುಪಿ: ಸಂಘಟನೆ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಘಟನೆಯ ನಾಲ್ವರನ್ನು ವಜಾಗೊಳಿಸಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸಮಿತಿ ಕೈಗೊಂಡ ನಿರ್ಣಯದಂತೆ ರಾಜ್ಯ ಉಪಾಧ್ಯಕ್ಷ ಮಹೇಶ್ ಕಟ್ಟಿನಮನೆ, ಉಡುಪಿ-ಮಂಗಳೂರು ವಿಭಾಗ ಅಧ್ಯಕ್ಷ ಮೋಹನ್ ಭಟ್, ಗೌರವಾಧ್ಯಕ್ಷ ಚಂದ್ರಕಾಂತ್ ಶೆಟ್ಟಿ ಹಾಗೂ ಶಿವಮೊಗ್ಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಬಂಗೇರ ಅವರನ್ನು ಶ್ರೀರಾಮಸೇನಾ ಸಂಘಟನಾ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಮುಖಂಡರು ಫೆ.19ರಂದು ಉಡುಪಿಯಲ್ಲಿ ಶ್ರೀರಾಮಸೇನೆ ಸಂಘ ಟನೆಯ ಸಭೆ ಕರೆದು ಮುತಾಲಿಕ್ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸುವುದನ್ನು ವಿರೋಧಿಸಿದ್ದರು ಮತ್ತು ಸಂಘಟನೆಯ ನಾಯಕ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು.
Next Story





