ಮಲ್ಲತ್ತಳ್ಳಿ ಕೆರೆಯಲ್ಲಿ ಶಿವನ ಪ್ರತಿಮೆ: ಸಚಿವ ಮುನಿರತ್ನಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಫೆ.20: ಮಲ್ಲತ್ತಳ್ಳಿಯ ಕೆರೆಯಲ್ಲಿ ಬಯಲು ರಂಗಮಂದಿರ, ಶಿವನ ಪ್ರತಿಮೆ ಮತ್ತು ಕಾಂಕ್ರೀಟ್ ಕಟ್ಟಡ ನಿರ್ಮಾಣ ಮಾಡುತ್ತಿರುವ ಆರೋಪ ಸಂಬಂಧ ಸಚಿವ ಮುನಿರತ್ನ ನಾಯ್ಡು ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೆರೆ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಮತ್ತು ಒತ್ತುವರಿ ತೆರವುಗೊಳಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಪ್ರತಿವಾದಿಗಳಾದ ಸಚಿವ ಮುನಿರತ್ನ, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೋವಿಂದರಾಜು ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ಕೆರೆ ಅಂಗಳದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕಾಗಿ ಸರಕಾರದಿಂದ ಯಾವುದೇ ಪ್ರಾಧಿಕಾರದಿಂದ ಕಾಮಗಾರಿಗೆ ಕಾರ್ಯಾದೇಶ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
Next Story





