Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿ ಆಸ್ಪತ್ರೆಯಲ್ಲಿ 'ಮೃತ' ಎಂದು...

ದೆಹಲಿ ಆಸ್ಪತ್ರೆಯಲ್ಲಿ 'ಮೃತ' ಎಂದು ಘೋಷಿಸಿದ್ದ ಮಗು ಸ್ಮಶಾನದಲ್ಲಿ ಜೀವಂತ!

21 Feb 2023 8:36 AM IST
share
ದೆಹಲಿ ಆಸ್ಪತ್ರೆಯಲ್ಲಿ ಮೃತ ಎಂದು ಘೋಷಿಸಿದ್ದ ಮಗು ಸ್ಮಶಾನದಲ್ಲಿ ಜೀವಂತ!

ಹೊಸದಿಲ್ಲಿ: ದೆಹಲಿಯ ಎಲ್‌ಎನ್‌ಜೆಪಿ ಸರ್ಕಾರಿ ಆಸ್ಪತ್ರೆಯಲ್ಲಿ ’ಮೃತ’ ಎಂದು ಘೋಷಿಸಲ್ಪಟ್ಟ ನವಜಾತ ಹೆಣ್ಣುಮಗು ಸ್ಮಶಾನದಲ್ಲಿ ಮಣ್ಣು ಮಾಡಲು ಕೊಂಡೊಯ್ದಾಗ ಜೀವಂತ ಇರುವುದು ಕಂಡುಬಂದಿದೆ ಎಂದು ಪೋಷಕರು ಹೇಳಿದ್ದಾರೆ.

ಮಗುವಿನ ಅಂತ್ಯಸಂಸ್ಕಾರ ನಡೆಸಲು ಸಿದ್ಧತೆ ನಡೆಸುತ್ತಿದ್ದಾಗ ಮಗು ಜೀವಂತ ಇರುವುದು ಕಂಡುಬಂತು ಎಂದು ಕುಟುಂಬ ಸದಸ್ಯರು ವಿವರಿಸಿದ್ದಾರೆ. "ಇದು ಸಾಮಾನ್ಯ ಹೆರಿಗೆ. ಆದರೆ ತಾಯಿ ಕೇವಲ 23 ವಾರಗಳ ಗರ್ಭಿಣಿಯಗಿದ್ದಳು. ಅವಧಿಪೂರ್ವವಾಗಿ ಜನಿಸಿದ ಹೆಣ್ಣುಮಗು ಕೇವಲ 490 ಗ್ರಾಂ ತೂಕ ಇತ್ತು" ಎಂದು ವೈದ್ಯರು ಹೇಳಿದ್ದಾರೆ. ಈ ಪ್ರಕರಣ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಸ್ಪಷ್ಟಪಿಸಿದ್ದಾರೆ.

"ನಿನ್ನೆ ನನ್ನ ಸೊಸೆ ಹುಟ್ಟಿದಳು. ಆಕೆ ಜೀವಂತ ಇದ್ದರೂ ಮೃತಪಟ್ಟಿದೆ ಎಂದು ಘೋಷಿಸಲಾಗಿತ್ತು" ಎಂದು ಶಿಶುವಿನ ಮಾವ ಸಲ್ಮಾನ್ ದೂರಿದ್ದಾರೆ. ಪೆಟ್ಟಿಗೆಯಲ್ಲಿ ಶಿಶು ಇರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಮಗುವನ್ನು ಆಸ್ಪತ್ರೆಗೆ ವಾಪಾಸು ಕರೆ ತಂದ ಬಳಿಕ ಈ ವಿಡಿಯೊ ಚಿತ್ರೀಕರಿಸಲಾಗಿದೆ ಎಂದು ಕುಟುಂಬದವರು ಹೇಳಿದ್ದಾರೆ. ಮಗುವಿನ 35 ವರ್ಷ ವಯಸ್ಸಿನ ತಾಯಿಗೆ ಮೂರು ವರ್ಷದ ಮತ್ತೊಬ್ಬಳು ಹೆಣ್ಣುಮಗಳಿದ್ದಾಳೆ. ತಂದೆ ಟೂಲ್‌ಮೇಕಿಂಗ್ ಉದ್ಯೋಗಿ.

"ಮಗುವನ್ನು ನಮಗೆ ಪೆಟ್ಟಿಗೆಯೊಂದರಲ್ಲಿ ಹಸ್ತಾಂತರಿಸಿದ ಬಳಿಕ ಮಗುವನ್ನು ಮಣ್ಣು ಮಾಡಲು ಸಿದ್ಧತೆ ನಡೆಸಿದೆವು. ಸಂಜೆ 7.30ಕ್ಕೆ ಪೆಟ್ಟಿಗೆ ತೆರೆದಾಗ, ಮಗು ತನ್ನ ಕೈ ಕಾಲು ಅಲ್ಲಾಡಿಸುತ್ತಿರುವುದು ಕಂಡು ಬಂತು. ತಕ್ಷನ ನಾವು ಮತ್ತೆ ಆಸ್ಪತ್ರೆಗೆ ಕರೆದೊಯ್ದೆವು" ಎಂದು ಸಲ್ಮಾನ್, ಪಿಟಿಐಗೆ ವಿವರ ನೀಡಿದ್ದಾರೆ.

ಪಿಸಿಆರ್ ಸಹಾಯವಾಣಿಗೆ ಕರೆ ಮಾಡಿದರೂ ಪೊಲೀಸರು ಒಂದು ಕಾಗದದಲ್ಲಿ ವಿವರಗಳನ್ನು ದಾಖಲಿಸಿಕೊಂಡರು ಎಂದು ಶಿಶುವಿನ ತಂದೆ ಆಪಾದಿಸಿದ್ದಾರೆ. ಆದರೆ ಕುಟುಂಬದಿಂದ ಇದುವರೆಗೆ ಲಿಖಿತ ದೂರು ಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ತೆರಳಿದಾಗ ಬಾಗಿಲು ಮುಚ್ಚಿದ ವೈದ್ಯರು ಮಗುವನ್ನು ಮತ್ತೆ ದಾಖಲಿಸಿಕೊಳ್ಳಲು ನಿರಾಕರಿಸಿದರು ಎಂದು ಸಲ್ಮಾನ್ ಆಪಾದಿಸಿದ್ದಾರೆ.

ಭದ್ರತಾ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ. ಮಗುವನ್ನು ದಾಖಲಿಸಿಕೊಳ್ಳುವಂತೆ ಪ್ರತಿಭಟನೆ ನಡೆಸಿ ಆಗ್ರಹಿಸಿದರೂ ಪ್ರಯೋಜನವಾಗಲಿಲ್ಲ. ನಾವು ಪೊಲೀಸರಿಗೆ ಕರೆ ಮಾಡಿದ ಬಳಿಕ ಅವರ ಮಧ್ಯಪ್ರವೇಶದಿಂದ ಮತ್ತೆ ದಾಖಲಿಸಿಕೊಳ್ಳಲಾಯಿತು ಎಂದು ಹೇಳಿದ್ದಾರೆ.

share
Next Story
X