Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅನುಷ್ಠಾನದಲ್ಲಿ ಹಿಂದಿದ್ದರೂ ಕೋಟ್ಯಂತರ...

ಅನುಷ್ಠಾನದಲ್ಲಿ ಹಿಂದಿದ್ದರೂ ಕೋಟ್ಯಂತರ ರೂ. ಖರ್ಚು ಮಾಡಿ ಫಲಾನುಭವಿಗಳ ಸಮ್ಮೇಳನ!

ಜಿ.ಮಹಾಂತೇಶ್ಜಿ.ಮಹಾಂತೇಶ್21 Feb 2023 8:47 AM IST
share
ಅನುಷ್ಠಾನದಲ್ಲಿ ಹಿಂದಿದ್ದರೂ ಕೋಟ್ಯಂತರ ರೂ. ಖರ್ಚು ಮಾಡಿ ಫಲಾನುಭವಿಗಳ ಸಮ್ಮೇಳನ!

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರಗಳು  ಆಯವ್ಯಯದಲ್ಲಿ ಘೋಷಿಸಿದ್ದ  ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನದಲ್ಲಿ ಹಿಂದೆ ಬಿದ್ದಿದ್ದರೂ ವಿಧಾನಸಭೆ ಚುನಾವಣೆಗಿನ್ನು ಮೂರ್ನಾಲ್ಕು ತಿಂಗಳು ಇರುವಾಗಲೇ ರಾಜ್ಯ ಬಿಜೆಪಿ ಸರಕಾರವು ಇದೀಗ ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಲು ಮುಂದಾಗಿದೆ.

ಈಗಾಗಲೇ ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರಾಜ್ಯ ಸರಕಾರವು ಆಯೋಜಿಸಿದ್ದ ಬೃಹತ್ ಸಮ್ಮೇಳನ, ಸಮಾವೇಶಕ್ಕೆ ಪ್ರಧಾನಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಘಟಕದ ಹಲವು ಧುರೀಣರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಕೋಟ್ಯಂತರ ರುಪಾಯಿ ಖರ್ಚು ಮಾಡಿ ದುಂದುವೆಚ್ಚ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿರುವ ಹೊತ್ತಿನಲ್ಲೇ ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜಿಸಬೇಕು ಎಂದು ಎಲ್ಲ ಇಲಾಖೆಗಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾ ರಿಗಳಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು 2023ರ ಫೆ.10ರಂದು ನಿರ್ದೇಶಿಸಿ ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ''the-file.in''ಗೆ ಲಭ್ಯವಾಗಿದೆ.

ಮುಖ್ಯ ಕಾರ್ಯದರ್ಶಿ ಬರೆದಿರುವ ಪತ್ರದಲ್ಲೇನಿದೆ?:

ದೇಶದ ಪ್ರಜೆಗಳೆಲ್ಲರ ಸರ್ವತೋಮುಖ ಅಭಿವೃ ದ್ಧಿಗೆ ಕಂಕಣಬದ್ಧವಾಗಿ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ.  ಪ್ರಸ್ತುತ ಭಾರತ ಸರಕಾರದ ಪ್ರಾಯೋಜಕತ್ವದ ಯೋಜ ನೆಗಳು ಹಾಗೂ ಸ್ವಯಂ ರಾಜ್ಯ ಸರಕಾರದ ಹಲವು ಯೋಜನೆಗಳ ಮೂಲಕ ಸಮಾಜದ ಕಟ್ಟ ಕಡೆಯ ನಾಗರಿಕರನ್ನು ತಲುಪಲು ನಮ್ಮ ಸರಕಾರವು ಅವಿರತವಾಗಿ ಕ್ರಮ ವಹಿಸಿದೆ.

ಕೇಂದ್ರ ಸರಕಾರದ ಪ್ರಾಯೋಜಿತ/ಸ್ವಯಂ ರಾಜ್ಯ ಸರಕಾರದ ಫಲಾನುಭವಿ ಆಧಾರಿತ ಹಲವು ಯೋಜನೆಗಳಿಗೆ ಸಂಪೂರ್ಣವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಆಯಾ ಇಲಾಖೆಗಳ ಸಹಯೋಗದಲ್ಲಿ ಆಂದೋಲನ ರೂಪದಲ್ಲಿ ಚಾಲನೆ ನೀಡಲು ತಿಳಿಸಿದೆ. ಈ ಪ್ರಕ್ರಿಯೆಯಲ್ಲಿ ಎಲ್ಲ ಫಲಾನುಭವಿ ಆಧರಿತ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ವಹಿಸಬೇಕು.

ಫಲಾನುಭವಿಗಳ ಆಧಾರಿತ ಯೋಜನೆಗಳ ಎಲ್ಲ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರನ್ನು ಒಳಗೊಂಡಂತೆ ಫಲಾನುಭವಿಗಳ ಸಮ್ಮೇಳನವನ್ನು ಶೀಘ್ರವಾಗಿ ಆಯೋಜಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ನಿರ್ದೇಶಿಸಿದ್ದಾರೆ.

‘ಬೊಕ್ಕಸದ ಮೇಲೆ ವ್ಯತಿರಿಕ್ತ ಪರಿಣಾಮ’

ಕಂದಾಯ ಗ್ರಾಮಗಳಲ್ಲಿ ವಾಸಿಸುತ್ತಿರುವ ಮಂದಿಗೆ ಹಕ್ಕುಪತ್ರಗಳನ್ನು ಸ್ಥಳೀಯ ತಹಶೀಲ್ದಾರ್‌ಗಳು ನಿಯಮಾನುಸಾರ ವಿತರಿಸುತ್ತಾರೆ. ಚುನಾವಣೆ ವರ್ಷವಾಗಿರುವ ಕಾರಣ ಹಕ್ಕುಪತ್ರಗಳ ವಿತರಣೆಯನ್ನು ರಾಜಕೀಯಕರಣಗೊಳಿಸಲಾಗುತ್ತಿದೆಯಲ್ಲದೇ ಇದರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ದುಂದುವೆಚ್ಚ ಮಾಡಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಬೊಕ್ಕಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹೀಗಿದ್ದರೂ ಜಿಲ್ಲಾಮಟ್ಟದಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲು ಹೊರಡಿಸಿರುವ ಸುತ್ತೋಲೆಯು ಬೊಕ್ಕಸದಲ್ಲಿ ಉಳಿದಿರುವ ಹಣವನ್ನೂ ಬರಿದಾಗಿಸಲಿದೆ ಎನ್ನುತ್ತಾರೆ ಉನ್ನತ ಅಧಿಕಾರಿಯೊಬ್ಬರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X