ಕಡಬ: ಇಬ್ಬರನ್ನು ಬಲಿ ಪಡೆದ ಕಾಡಾನೆಯ ಸೆರೆಗೆ ಕಾರ್ಯಾಚರಣೆ ಆರಂಭ

ಕಡಬ, ಫೆ.21. ಇಲ್ಲಿನ ಮರ್ಧಾಳ ಸಮೀಪದ ನೈಲ ಸಮೀಪ ಸೋಮವಾರದಂದು ಇಬ್ಬವರನ್ನು ಬಲಿ ಪಡೆದ ಕಾಡಾನೆಯ ಸೆರೆ ಹಿಡಿಯುವ ಕಾರ್ಯಾಚರಣೆಯು ಐದು ಸಾಕಾನೆ ಹಾಗೂ ನುರಿತ ತಂಡದವರ ಉಪಸ್ಥಿತಿಯಲ್ಲಿ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಂಗಳವಾರದಂದು ಆರಂಭಗೊಂಡಿದೆ.
ಸೋಮವಾರ ಬೆಳಿಗ್ಗೆ ಕಡಬ ಸಮೀಪದ ಮರ್ಧಾಳ ನೈಲ ಎಂಬಲ್ಲಿ ಕಾಡಾನೆಯು ಇಬ್ಬರನ್ನು ತಿವಿದು ಕೊಂದು ಹಾಕಿತ್ತು. ಆಕ್ರೋಶಗೊಂಡ ಸ್ಥಳೀಯರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಡಾನೆಯನ್ನು ಸ್ಥಳಾಂತರಗೊಳಿಸದೆ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಮಣಿದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಯನ್ನು ಸ್ಥಳಾಂತರಿಸುವ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿತ್ತು. ಸೋಮವಾರ ರಾತ್ರಿ ವೇಳೆಗೆ ಮೈಸೂರು ಹಾಗೂ ದುಬಾರೆಯಿಂದ ಆನೆಗಳು ಆಗಮಿಸಿದ್ದು, ಮಂಗಳವಾರ ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿದೆ.
Next Story





