Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಪ್ರಿಲ್ 1ರಿಂದ ದುಡಿಯುವ ಹೆಣ್ಣು...

ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ

21 Feb 2023 2:48 PM IST
share
ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ

ಬೆಂಗಳೂರು, ಫೆ. 21: ಎಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. 

ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್  ಬಿಎಸ್  4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. 

''ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ  ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು.  ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು'' ಎಂದರು.

ಉತ್ತಮ ಸೇವೆ:  ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ.  ಈ ಬಾರಿಯ  ಬಜೆಟ್ ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು,   ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ . ಜನರಿಗೆ ಉತ್ತಮ ಸೇವೆ ಒದಗಿಸೋಣ ಎಂದರು. 

ಸಂಚಾರದ ಹೊಸ ಪಡೆ: ಹೊಸ ಸಂಚಾರದ ವಿಶೇಷ  ಒಂದು ಪಡೆ ಅಂಬಾರಿಯನ್ನು ಇಂದು  ಲೋಕಾರ್ಪಣೆ ಮಾಡಲಾಗಿದೆ.  ಇದರಲ್ಲಿ ಸ್ಲೀಪರ್ ವ್ಯವಸ್ಥೆ ಇದೆ‌. ದೂರ ಪ್ರಯಾಣಕ್ಕೆ ಅಗತ್ಯವಿರುವ ರೈಲ್ವೆ ಮಾದರಿಯಲ್ಲಿವುದಕ್ಕಿಂತ ಉತ್ತಮವಾದ  ವ್ಯವಸ್ಥೆ ಕಲ್ಪಿಸಲಾಗಿದೆ.  ಹಿಂದೆ ವೊಲ್ವೊ ಬಸ್ ಗಳು ಹೆಚ್ಚು ಅನುಕೂಲಕರವಾಗಿರಲಿಲ್ಲ.  ಹಿಂದಿನ ಸಮಸ್ಯೆಗಳನ್ನು ಅರಿತು ಈ ಬಸ್ ಗಳಲ್ಲಿ ಮಲ್ಟಿ ಎಕ್ಸೆಲ್ ವ್ಯವಸ್ಥೆ  ಕಲ್ಪಿಸಿ,  ಉತ್ತಮ ವ್ಯವಸ್ಥೆ ರೂಪಿಸಲಾಗಿದೆ. ಸುಲಭವಾಗಿ, ಸುಖವಾಗಿ ರಾತ್ರಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯ ಸಾರಿಗೆಗೆ ಇನ್ನಷ್ಟು ಬಸ್ಸುಗಳನ್ನು ಪಡೆದುಕೊಳ್ಳುವುದು ಸೂಕ್ತ ಎಂದರು. 

ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಯೋಜನೆ ಅಗತ್ಯ

ಕೆ.ಎಸ್.ಆರ್.ಟಿ. ಸಿ ತನ್ನದೇ ಇತಿಹಾಸವನ್ನು ಹೊಂದಿದ್ದು, ಉತ್ತಮ ಸೇವೆಯನ್ನು ಒದಗಿಸುತ್ತಿದೆ. ಕೆಂಪು ಬಸ್ ನಲ್ಲಿ  ಕಾಲೇಜಿಗೆ  ಹೋಗುತ್ತಿದ್ದುದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಆಗ ಡ್ರೈವರ್ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಇತ್ತು.   ಗ್ರಾಮೀಣ ಜನರು ತಮ್ಮ ಪ್ರಯಾಣವನ್ನು ಕೆ.ಎಸ್.ಆರ್.ಟಿ. ಸಿ ಬಸ್ ಗಳ ಮೂಲಕವೇ ಗುರುತಿಸಿಕೊಳ್ಳುತ್ತಾರೆ. ಇಂಥ ಸೇವೆಯು ಖಾಸಗೀಕರಣದಿಂದ ಪೈಪೋಟಿ ಎದುರಿಸುತ್ತಿದೆ. 

ಖಾಸಗಿಯವರು ಲಾಭದಾಯಕ ಮಾರ್ಗಗಳಲ್ಲಿ ಮಾತ್ರ ಸಂಚಾರ ನಡೆಸುತ್ತಾರೆ. ಸಾಮಾಜಿಕವಾಗಿ ಕೆಲಸ ಮಾಡುವ ಮಾರ್ಗಗಳಮ್ಮ ಕರಾರಸಾನಿಕ್ಕೆ ಬಿಡುತ್ತಾರೆ.  ನಾವು ಸೇವಾ ವಲಯದಲ್ಲಿಯೂ ಹಾಗೂ ವಾಣಿಜ್ಯ ಮಾರ್ಗಗಳಲ್ಲಿಯೂ ಸಂಚರಿಸಿ ನಿಗಮವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದರು

ಕಂದಾಯ ಸಚಿವ ಆರ್.ಅಶೋಕ್, ಕೆ.ಎಸ್.ಆರ್.ಟಿ. ಸಿ  ಅಧ್ಯಕ್ಷ ಚಂದ್ರಪ್ಪ , ಉಪಾಧ್ಯಕ್ಷ ಮೋಹನ್ ಮೆಣಸಿನಕಾಯಿ, ಶಾಸಕರಾದ ಸೋಮಶೇಖರ್ ರೆಡ್ಡಿ, ಸತೀಶ್ ರೆಡ್ಡಿ, ಯಾದವ್ , ನಿವೃತ್ತ ಐ.ಎ. ಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು

share
Next Story
X