ಹೂಡೆ ಸರಕಾರಿ ಉರ್ದು ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ

ಉಡುಪಿ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಅಕ್ಷರ ಫೌಂಡೇಶನ್‌ಗಳ ಸಂಯುಕ್ತ ಆಶ್ರಯದಲ್ಲಿ ಗಣಿತ ಕಲಿಕಾ ಆಂದೋಲನ ಹೂಡೆಯ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು.
ತೋನ್ಸೆ ಗ್ರಾಪಂ ಕೆಮ್ಮಣ್ಣುವಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಮಲಾ ವಿದ್ಯಾರ್ಥಿಗಳು ತಯಾರಿಸಿದ ನವಿಲಿನ ಚಿತ್ರಪಟವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಉಸ್ತಾದ್ ಸಾದಿಕ್ ವಹಿಸಿದ್ದರು.
ವೇದಿಕೆಯಲ್ಲಿ ಗ್ರಾಪಂ ಕಾರ್ಯದರ್ಶಿ ದಿನಕರ್, ಸದಸ್ಯರಾದ ಮುಹಮ್ಮದ್ ಇದ್ರೀಸ್, ಕುಸುಮ, ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷ ಅಪ್ಸರಿ, ಸ್ವಯಂ ಸೇವಕರಾದ ಆಸಿಯಾ ಮತ್ತು ಶಬನಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋ ಪಾಧ್ಯಾಯಿನಿ ನೀಲಾವತಿ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ೪,೫ ಮತ್ತು ೬ನೇ ತರಗತಿಯ ವಿದ್ಯಾರ್ಥಿಗಳಿಗೆ ಗಣಿತ ಕಲಿಕೆಯ ಪ್ರಶ್ನೆ ಪತ್ರಿಕೆ ವಿತರಿಸಿ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
Next Story





