ಉಡುಪಿ, ಫೆ.21: ಕರ್ನಾಟಕ ವಿಧಾನಸಭಾ ಚುನಾವಣೆಯ ಅಂಗವಾಗಿ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾನ ಜಾಗೃತಿಯ ಕುರಿತ ಕಿರುಚಿತ್ರ ನಿರ್ಮಾಣ ಸ್ಪರ್ಧೆಗೆ ಕಿರುಚಿತ್ರಗಳನ್ನು ಸಲ್ಲಿಸುವ ಅವಧಿ ಯನ್ನು ಮಾರ್ಚ್ ೫ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.