BSY ಅನಿವಾರ್ಯವಲ್ಲ ಎಂದು ಕಟೀಲ್ ಹೇಳಿದ್ದೇಕೆ?: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: 'ಯಡಿಯೂರಪ್ಪ ಅವರನ್ನು ಯಾರೂ ಬಲವಂತವಾಗಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಕ್ಕಿಳಿಸಿಲ್ಲ. ''ನನಗೆ ವಯಸ್ಸಾಗಿದೆ. ಹೆಚ್ಚು ಕೆಲಸ ಮಾಡಲು ಆಗುವುದಿಲ್ಲ. ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತೇನೆ'' ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದರು’ ಎಂದು ನಿನ್ನೆ (ಮಂಗಳವಾರ) ಪರಿಷತ್ತಿನಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಅವರ ಹೇಳಿಕೆ ನೀಡಿದ್ದರು.
ಸಚಿವರ ಈ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಯಸ್ಸಿನ ಕಾರಣದಿಂದ ರಾಜೀನಾಮೆ ಕೊಟ್ಟಿದ್ದಿದ್ದರೆ "ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ" ಎಂದು ಕೊನೆಯ ದಿನದವರೆಗೂ ಹೇಳಿದ್ದೇಕೆ?'' ಎಂದು ಪ್ರಶ್ನೆ ಮಾಡಿದೆ.
''ಏಕಾಏಕಿ ರಾಜೀನಾಮೆ ಕೊಟ್ಟಿದ್ದೇಕೆ? ಕಣ್ಣೀರು ಹಾಕಿದ್ದೇಕೆ? BSY ಅನಿವಾರ್ಯವಲ್ಲ ಎಂದು ಕಟೀಲ್ ಹೇಳಿದ್ದೇಕೆ? ಮೂಲೆಗುಂಪು ಮಾಡಿದ್ದೇಕೆ? #BSYmuktaBJP ಪೂರ್ವಯೋಜಿತ ಅಭಿಯಾನವಲ್ಲವೇ?'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
BSY ವಯಸ್ಸಿನ ಕಾರಣದಿಂದ ರಾಜೀನಾಮೆ ಕೊಟ್ಟಿದ್ದಿದ್ದರೆ
— Karnataka Congress (@INCKarnataka) February 22, 2023
"ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ" ಎಂದು ಕೊನೆಯ ದಿನದವರೆಗೂ ಹೇಳಿದ್ದೇಕೆ?
ಏಕಾಏಕಿ ರಾಜೀನಾಮೆ ಕೊಟ್ಟಿದ್ದೇಕೆ? ಕಣ್ಣೀರು ಹಾಕಿದ್ದೇಕೆ?
BSY ಅನಿವಾರ್ಯವಲ್ಲ ಎಂದು ಕಟೀಲ್ ಹೇಳಿದ್ದೇಕೆ?
ಮೂಲೆಗುಂಪು ಮಾಡಿದ್ದೇಕೆ?#BSYmuktaBJP ಪೂರ್ವಯೋಜಿತ ಅಭಿಯಾನವಲ್ಲವೇ? pic.twitter.com/RmfaUj2kj1