Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಹಿಣಿ ಸಿಂಧೂರಿ ಕ್ಯಾನ್ಸರ್ ಇದ್ದ ಹಾಗೆ,...

ರೋಹಿಣಿ ಸಿಂಧೂರಿ ಕ್ಯಾನ್ಸರ್ ಇದ್ದ ಹಾಗೆ, ಎಲ್ಲರನ್ನೂ ಬುಟ್ಟಿಗೆ ಹಾಕೊಳ್ತಾಳೆ: ಡಿ.ರೂಪಾ ಅವರದ್ದೆನ್ನಲಾದ ಆಡಿಯೋ ವೈರಲ್

22 Feb 2023 11:13 AM IST
share
ರೋಹಿಣಿ ಸಿಂಧೂರಿ ಕ್ಯಾನ್ಸರ್ ಇದ್ದ ಹಾಗೆ, ಎಲ್ಲರನ್ನೂ ಬುಟ್ಟಿಗೆ ಹಾಕೊಳ್ತಾಳೆ: ಡಿ.ರೂಪಾ ಅವರದ್ದೆನ್ನಲಾದ ಆಡಿಯೋ ವೈರಲ್

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಜಟಾಪಟಿ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದು, ಇಬ್ಬರೂ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. 

ಆದರೆ, ಈ ನಡುವೆ ರೋಹಿಣಿ ಬಗ್ಗೆ ಡಿ.ರೂಪಾ ಮಾತಾಡಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋದಲ್ಲಿ ಡಿ.ರೂಪಾ  ಅವರು ರೋಹಿಣಿ ಸಿಂಧೂರಿ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. 

ಆಡಿಯೋದಲ್ಲಿ ಏನಿದೆ?: 

ರೋಹಿಣಿ ಸಿಂಧೂರಿಯವರು ತಮ್ಮ ಪ್ರಭಾವ ಬಳಸಿಕೊಂಡು ತಮ್ಮ ಪತಿಯ ಅಣ್ಣನನ್ನು ಬಿಜೆಪಿಗೆ ಸೇರಿಸುವ ಸಿದ್ಧತೆಯನ್ನು ಮಾಡುತ್ತಿದ್ದಾಳೆ. ಒಂದು ಫೌಂಡೇಶನ್ ಅಂತ ಮಾಡಿ ಒಂದು ಕಾರ್ಯಕ್ರಮ ಆಯೋಜನೆ ಮಾಡಿದ್ದಳು. ಆ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆ ಮತ್ತು ಸ್ವಾಮೀಜಿಯೊಬ್ಬರನ್ನು ಕರೆಸಿದ್ದರು. ಇದನ್ನು ನನ್ನ ಪತಿ ಅವರ ಬಳಿಯೇ ಹೇಳಿಕೊಂಡಿದ್ದಾಳೆ. ಫೌಂಡೇಶನ್ ಉದ್ದೇಶ ಏನು ಅಂತ ನನ್ನ ಪತಿ ಕೇಳಿದಾಗ, 'ಫೌಂಡೇಶನ್ ಉದ್ದೇಶ ಸದ್ಯಕ್ಕೆ ಚಾರಿಟಿ ಆದರೆ, ರಾಜಕೀಯ ಪಕ್ಷ ಸೇರಿ ಬಿಜೆಪಿಯಿಂದ ಟಿಕೆಟ್ ಪಡೆಯೋದು' ಎಂದು  ಆಕೆ ಹೇಳಿಕೊಂಡಿದ್ದಾಳೆ ಎಂದು ರೂಪಾ ಆರೋಪಿಸಿದ್ದಾರೆ. 

ರೋಹಿಣಿ ಫ್ಯಾಮಿಲಿದು ಲ್ಯಾಂಡ್ ಬ್ಯುಸಿನೆಸ್, ರಿಯಲ್ ಎಸ್ಟೇಟ್ ಬ್ಯುಸಿನೆಸ್. ಕಬಿನಿ ಹತ್ತಿರ ಒಂದು ಲ್ಯಾಂಡ್ ಇದೆ ಅಂತಾ ಪಹಣಿ ಕೊಟ್ಟಿದ್ದಾರೆ.  ನನ್ನ ಪತಿ ಲ್ಯಾಂಡ್ ರೆಕಾರ್ಡ್ಸ್ ನಲ್ಲಿ ಇರೋದ್ರಿಂದ ಹೆಲ್ಪ್ ತಗೋಂಡಿದ್ದಾಳೆ. ಯಾರೋ ಬುಜ್ಜಮ್ಮ ಅನ್ನೋರ ಲ್ಯಾಂಡ್ ಎಷ್ಟೋ ಜನರ ಹೆಸರಲ್ಲಿದೆ ತಗೋಬಹುದಾ ಅಂತಾ  ಅಭಿಪ್ರಾಯ  ಕೇಳಿದ್ದಾಳೆ. ಆ ಲ್ಯಾಂಡ್, ಈ ಲ್ಯಾಂಡ್ ಅಂಥ ನಮ್ಮವರಿಂದ ರೋಹಿಣಿ ಸಿಂಧೂರಿ ಮಾಹಿತಿ ಪಡೆಯುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ. 

ಆಯಮ್ಮನ ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಡಿ.ರೂಪಾ ಗಂಗರಾಜು ಜತೆ ಸಂಭಾಷಣೆ ವೇಳೆ ಆರೋಪ ಮಾಡಿದ್ದಾರೆ. ಸದ್ಯ ಈ ಆಡಿಯೋ ಈಗ ವೈರಲ್ ಆಗುತ್ತಿದೆ.

share
Next Story
X