ಶಿಡ್ಲಘಟ್ಟ: ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ತಾಯಿ, ಇಬ್ಬರು ಹೆಣ್ಮಕ್ಕಳ ಮೃತದೇಹ ಪತ್ತೆ
ಆತ್ಮಹತ್ಯೆಗೆ ಯತ್ನಿಸಿದ ತಂದೆಯ ಸ್ಥಿತಿಯ ಗಂಭೀರ

ಆತ್ಮಹತ್ಯೆಗೆ ಯತ್ನಿಸಿದ ತಂದೆಯ ಸ್ಥಿತಿಯ ಗಂಭೀರ
ಶಿಡ್ಲಘಟ್ಟ, ಫೆ.22: ಇಬ್ಬರು ಹೆಣ್ಣು ಮಕ್ಕಳು ಹಾಗೂ ತಾಯಿಯ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಣ್ಣೂರು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮೃತರನ್ನು ನೇತ್ರಾವತಿ(37) ಮಕ್ಕಳಾದ ವರ್ಷಿತಾ(12) ಹಾಗೂ ಸ್ನೇಹಾ(9) ಎಂದು ಗುರುತಿಸಲಾಗಿದೆ. ವಿಷ ಸೇವನೆಗೊಳಗಾಗಿ ಗಂಭೀರಾವಸ್ಥೆಯಲ್ಲಿರುವ ಸೊಣ್ಣಪ್ಪ(48)ರನ್ನು ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಿಂದ ಬೆಂಕಿಯ ಜ್ವಾಲೆ ಕಂಡು ಸ್ಥಳೀಯರು ಧಾವಿಸಿದಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಇದು ಕೊಲೆಯೊ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಈ ಬಗ್ಗೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story