ಬೆಳ್ಳಾರೆ | ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ: ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು

ಬೆಳ್ಳಾರೆ, ಫೆ.22: ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಯುವಕನೋರ್ವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.
ಬೆಳ್ಳಾರೆ ಗ್ರಾಮದ ಕೊಲಂಬಳ ನಿವಾಸಿ ಅಶ್ರಫ್ ಯಾನೆ ಅಚ್ಚಪ್ಪು ಆರೋಪಿ. ಈತ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿದಲ್ಲದೆ, ರಾತ್ರಿ ವೇಳೆ ತಾಯಿಯ ಮೊಬೈಲ್ ಫೋನ್ ನಿಂದ ಕರೆ ಮಾಡಬೇಕೆಂದು ಒತ್ತಾಯಿಸಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ.
Next Story