Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಾಹ ಆರತಕ್ಷತೆಗೂ ಮುನ್ನವೇ ರಕ್ತದ...

ವಿವಾಹ ಆರತಕ್ಷತೆಗೂ ಮುನ್ನವೇ ರಕ್ತದ ಮಡುವಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ವಧು-ವರ

22 Feb 2023 2:54 PM IST
share
ವಿವಾಹ ಆರತಕ್ಷತೆಗೂ ಮುನ್ನವೇ ರಕ್ತದ ಮಡುವಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ವಧು-ವರ

ರಾಯ್ಪುರ: ವಿವಾಹ ಆರತಕ್ಷತೆಗೂ ಮುನ್ನವೆ ನವ ವಿವಾಹಿತ ಜೋಡಿಯೊಂದು ಚಾಕು ಇರಿತದಿಂದ ಹತ್ಯೆಗೊಳಗಾಗಿ ತಾವು ವಾಸಿಸುತ್ತಿದ್ದ ಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಛತ್ತೀಸ್‌ಗಢದ ರಾಜಧಾನಿ ರಾಯ್ಪುರದಲ್ಲಿ ನಡೆದಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ದಂಪತಿಗಳ ನಡುವೆ ಜಗಳ ಸ್ಫೋಟಗೊಂಡಿರುವುದರಿಂದ, ಮೊದಲು ಪತ್ನಿಗೆ ಪತಿಯು ಇರಿದು ಕೊಂದು, ನಂತರ ತಾನೂ ಇರಿದುಕೊಂಡು ಸಾವನ್ನಪ್ಪಿದ್ದಾನೆ ಎಂದು ಘಟನೆಯ ಕುರಿತು ಪೊಲೀಸರು ಶಂಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿಯೊಬ್ಬರು, ಘಟನೆಯು ಮಂಗಳವಾರ ತಡ ರಾತ್ರಿ ತಿಕ್ರಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಿಜ್‌ಗರ್‌ನಲ್ಲಿ ಸಂಭವಿಸಿದೆ ಎಂದು ತಿಳಿಸಿದ್ದಾರೆ.

"ಅಸ್ಲಾಂ (24) ಹಾಗೂ ಕಾಕ್ಷಾ ಬಾನೊ (22) ಇಬ್ಬರೂ ರವಿವಾರ ವಿವಾಹವಾಗಿದ್ದರು. ನಂತರ ಅವರ ವಿವಾಹ ಆರತಕ್ಷತೆಯು ಮಂಗಳವಾರ ರಾತ್ರಿ ನಿಗದಿಯಾಗಿತ್ತು. ಅವರು ಸಮಾರಂಭಕ್ಕಾಗಿ ಸಿದ್ಧವಾಗುವಾಗ ಅವರಿಬ್ಬರ ಕೊಠಡಿಯಿಂದ ವಧು ಚೀರಾಡುವುದು ವರನ ತಾಯಿಯ ಕಿವಿಗೆ ಬಿದ್ದಿತು. ಕೂಡಲೇ ಅವರು ಅಲ್ಲಿಗೆ ಧಾವಿಸಿದಾಗ ಕೊಠಡಿಗೆ ಒಳಗಿನಿಂದ ಚಿಲಕ ಹಾಕಿರುವುದು ಕಂಡು ಬಂದಿತು. ಅವರು ತಮ್ಮ ಬಂಧುಗಳ ಕರೆಗೆ ಪ್ರತಿಕ್ರಿಯಿಸದಿದ್ದಾಗ ಕುಟುಂಬದ ಸದಸ್ಯರು ಕಿಟಕಿಯಿಂದ ಇಣುಕಿ ನೋಡಿದ್ದಾರೆ. ಆಗ ಅವರಿಬ್ಬರೂ ಪ್ತಜ್ಞಾಹೀನರಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಇದರ ಬೆನ್ನಿಗೇ ಅವರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ" ಎಂದು ಅವರು ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು, ಕೊಠಡಿಯ ಬಾಗಿಲು ಒಡೆದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದರು. ನಂತರ ಸ್ಥಳದಲ್ಲಿದ್ದ ಚಾಕುವೊಂದನ್ನು ವಶಪಡಿಸಿಕೊಳ್ಳಲಾಯಿತು ಎಂದು ಅವರು ಹೇಳಿದ್ದಾರೆ.

ಸಾಂದರ್ಭಿಕ ಸಾಕ್ಷ್ಯಾಧಾರಗಳ ಪ್ರಕಾರ, ದಂಪತಿಗಳ ನಡುವೆ ಜಗಳ ನಡೆದು, ಪತಿಯು ತನ್ನ ಪತ್ನಿಯ ಮೇಲೆ ಚಾಕುವಿನಿಂದ ಇರಿದು, ನಂತರ ತನಗೂ ಇರಿದುಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಿದ್ದೂ ಘಟನೆಯ ಕುರಿತು ತನಿಖೆಯನ್ನು ಮುಂದುವರಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

share
Next Story
X