ಹನೂರು: ಮಹಿಳೆಯ ಹತ್ಯೆಗೈದು ವಿಡಿಯೋ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಹನೂರು: ವ್ಯಕ್ತಿಯೋರ್ವ ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪಡಸಲನತ್ತ ಬಳಿ ವರದಿಯಾಗಿದೆ.
ತಮಿಳುನಾಡು ಮೂಲದ ಮುನಿರಾಜು(40) ನಾಗಮಲೆಯ ನಿವಾಸಿ ಲಕ್ಷ್ಮೀ(35) ಎಂಬುವರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮಂಗಳವಾರ ಘಟನೆ ನಡೆದಿದ್ದು ಬುಧವಾರ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ಏನೂ ಎಂಬುಂದು ತಿಳಿದು ಬಂದಿಲ್ಲ.
ಮಹಿಳೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದು, ಬಳಿಕ ವಿಡಿಯೊ ಚಿತ್ರೀಕರಿಸಿರುವ ಮುನಿರಾಜು, ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ. ವಿಡಿಯೊದಲ್ಲಿ ನಾನೇ ಕೊಲೆ ಮಾಡಿರುವುದಾಗಿ ಆತ ಹೇಳಿಕೊಂಡಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು, ಎಎಸ್ಪಿ ಸುದೇಶ್, ಮಲೆಮಹದೇಶ್ವರಬೆಟ್ಟ ಪೋಲಿಸರು ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story