Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾವನೆಗಳ ಅಭಿವ್ಯಕ್ತಿಗೆ ಮಾತೃಭಾಷೆ...

ಭಾವನೆಗಳ ಅಭಿವ್ಯಕ್ತಿಗೆ ಮಾತೃಭಾಷೆ ಸೂಕ್ತ: ಪ್ರೊ.ಪಿ.ಗಿರಿಧರ ಕಿಣಿ

ಮಣಿಪಾಲದಲ್ಲಿ ವಿಶ್ವ ಮಾತೃಭಾಷಾ ದಿನಾಚರಣೆ

22 Feb 2023 7:13 PM IST
share
ಭಾವನೆಗಳ ಅಭಿವ್ಯಕ್ತಿಗೆ ಮಾತೃಭಾಷೆ ಸೂಕ್ತ: ಪ್ರೊ.ಪಿ.ಗಿರಿಧರ ಕಿಣಿ
ಮಣಿಪಾಲದಲ್ಲಿ ವಿಶ್ವ ಮಾತೃಭಾಷಾ ದಿನಾಚರಣೆ

ಉಡುಪಿ : ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಮಾತೃಭಾಷೆ ಯಂಥ ಸೂಕ್ತ ಮಾಧ್ಯಮ ಮತ್ತೊಂದಿಲ್ಲ. ಪ್ರಸ್ತುತ ಮಾತೃಭಾಷೆಯಲ್ಲಿ ಪ್ರಾಥಮಿಕ ಶಾಲೆಯ ಬೋಧನ ವಿಧಾನಕ್ಕೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಾತೃಭಾಷಾ ದಿನವನ್ನು ಬಹುಭಾಷೆಯಲ್ಲಿ ಶಿಕ್ಷಣ ಒದಗಿಸುವ ಧ್ಯೇಯದೊಂದಿಗೆ ಆಚರಿಸುವ ಸಂಕಲ್ಪವನ್ನು ಯುನೆಸ್ಕೋ ಹೊಂದಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ ರಿಜಿಸ್ಟ್ರಾರ್ ಪ್ರೊ.ಪಿ.ಗಿರಿಧರ ಕಿಣಿ ಹೇಳಿದ್ದಾರೆ.  

ಮಾಹೆಯ ಭಾಷಾ ವಿಭಾಗ ಹಾಗೂ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರವು ವಿಶ್ವ ಮಾತೃಭಾಷಾ ದಿನದ ಸಂದರ್ಭದಲ್ಲಿ ಆಯೋಜಿಸಿದ ಮೂರು ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ದಿನದಂದು ಸಾಹಿತ್ಯ- ಕಲೆಗಳಿಗೆ ಸಂಬಂಧಿಸಿದ ಅಂತರ್ಶಿಸ್ತೀಯ ಮಹತ್ವದ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿರುವುದು ಅರ್ಥಪೂರ್ಣ ಎಂದರು. 

ಖ್ಯಾತ ಛಾಯಾಚಿತ್ರಗ್ರಾಹಕ ಅಸ್ಟ್ರೋಮೋಹನ್ ಅವರು ‘ಬೆಳಕಿನ ಭಾಷೆ’ ಮೂಲಕ ಅಭಿವ್ಯಕ್ತಿಸಿದ ಛಾಯಾಚಿತ್ರಗಳ ಪ್ರದರ್ಶನ ‘ಕನ್ನಡ ಶಾಲೆ’ಯನ್ನು ಫೋಟೊ ಕ್ಲಿಕ್ಕಿಸುವ ಮೂಲಕ ಅವರು ಅನಾವರಣಗೊಳಿಸಿದರು. 

ಛಾಯಾಚಿತ್ರಗ್ರಾಹಕ ಆಸ್ಟ್ರೋಮೋಹನ್ ಮಾತನಾಡಿ, ಕನ್ನಡ ಶಾಲೆ ಎಂಬುದನ್ನು ಕಲ್ಪಿಸಿಕೊಂಡಾಗ ನೂರಾರು ಚಿತ್ರಗಳು ನಮ್ಮ ಮನಸ್ಸಿನಲ್ಲಿ ಮೂಡುತ್ತವೆ. ಮಕ್ಕಳು ಮಾತೃಭಾಷೆಯಾದ ಕನ್ನಡದಲ್ಲಿ ಕಲಿಯುತ್ತಿರುವ ಶಾಲೆಗಳಿಗೆ ಅದರದೇ ಆದ ವಿಶಿಷ್ಟತೆ ಇದೆ. ಕನ್ನಡ ಶಾಲೆಗೆ ಸಂಬಂಧಿಸಿದ ಛಾಯಾಚಿತ್ರಗಳು ವಿಶ್ವ ಮಾತೃ ಭಾಷಾ ದಿನದ ಸಂದರ್ಭದಲ್ಲಿ ಅಪೂರ್ವ ದಾಖಲಾತಿಗಳೆನಿಸಿಕೊಳ್ಳುತ್ತವೆ ಎಂದರು.ಬಳಿಕ ಅವರು ವಿದ್ಯಾರ್ಥಿ ಗಳೊಂದಿಗೆ  ಛಾಯಾ ಚಿತ್ರಗ್ರಹಣದ ಕುರಿತ ಸಂವಾದದಲ್ಲಿ ಭಾಗವಹಿಸಿದರು.  

ಕನ್ನಡ ಮತ್ತು ಪ್ರಾದೇಶಿಕ ಭಾಷಾ ಕೇಂದ್ರದ ಸಂಯೋಜಕ ಡಾ. ಪೃಥ್ವೀರಾಜ ಕವತ್ತಾರು ಅತಿಥಿಗಳನ್ನು ಪರಿಚಯಿಸಿದರು. ಮಣಿಪಾಲ್ ಯೂನಿವರ್ಸಲ್ ಪ್ರೆಸ್‌ನ ಪ್ರಧಾನ ಸಂಪಾದಕಿ ಪ್ರೊ.ನೀತಾ ಇನಾಂದಾರ್,  ಭಾಷಾ ವಿಭಾಗದ ಮುಖ್ಯಸ್ಥರಾದ ಪ್ರೊ.ರಾಹುಲ್ ಪುಟ್ಟಿ , ತತ್ತ್ವಶಾಸ್ತ್ರ ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ್ ಎನ್.ಆಚಾರ್ಯ ಅತಿಥಿ ಗಳನ್ನು ಗೌರವಿಸಿದರು.

ಸ್ಪ್ಯಾನಿಶ್ ಭಾಷಾ ಉಪನ್ಯಾಸಕಿ ಮೇಘನಾ ಮಂಗಲ್ವೇಡೆ ಕಾರ್ಯಕ್ರಮ ನಿರೂಪಿಸಿದರು. ಮಾಹೆಯ ಭಾಷಾ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು   ‘ಪೊಯೆ-ಟ್ರಿ’ ಎಂಬ ವಿಶಿಷ್ಟ ಕನ್ನಡ ಮತ್ತು ಯುರೋಪಿಯನ್ ಭಾಷೆಗಳ ಅನುವಾದಿತ ಕಾವ್ಯಗಳನ್ನು ಪ್ರಸ್ತುತಪಡಿಸಿದರು. 

share
Next Story
X