ಹದಿಹರೆಯಲ್ಲಿ ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ಹದಿಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಮತ್ತು ನೈರ್ಮಲ್ಯದ ಅರಿವು ಮೂಡಿಸುವ ಕಾರ್ಯಕ್ರಮವೊಂದನ್ನು ಸರಕಾರಿ ಪ್ರೌಢ ಶಾಲೆ ಮಲ್ಪೆ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಡಾ. ರಕ್ಷಿತಾ ಅರ್ ಶೆಣೈ ಹದಿಹರೆಯದ ಹೆಣ್ಣುಮಕ್ಕಳಲ್ಲಿ ವೈಯಕ್ತಿಕ ಸ್ವಚ್ಛತೆಯ ಪ್ರಾಮುಖ್ಯತೆಯ ಕುರಿತಂತೆ ಅರಿವು ಮೂಡಿಸಿದರು.
ಮಲ್ಪೆಯ ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ಆರೋಗ್ಯ ನಿರೀಕ್ಷಕಿ ಶಿವಾಲಿ ನಾಯ್ಕ, ಮಲ್ಪೆಯ ಶಿಕ್ಷಣಾಧಿಕಾರಿ ಚಂದ್ರಕಲಾ ಉಪಸ್ಥಿತರಿದ್ದರು. ಆರೋಗ್ಯ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಹದಿಹರೆಯದ ಹೆಣ್ಣುಮಕ್ಕಳಿಗೆ ವೈಯಕ್ತಿಕ ಶುಚಿತ್ವ, ಋತುಸ್ರಾವದ ಸಂದರ್ಭದಲ್ಲಿ ಸ್ವಚ್ಛತೆ, ಜನನಾಂಗದ ಸ್ವಚ್ಚತೆ, ಗರ್ಭಧಾರಣೆ, ಸ್ಯಾನಿಟರಿ ಪ್ಯಾಡ್‌ನ ಉಪಯೋಗ ಮತ್ತು ವಿಲೇವಾರಿಯ ವಿಧಾನಗಳು, ಹಾರ್ಮೋನ್‌ನಿಂದ ಉಂಟಾಗುವ ದೈಹಿಕ ಬದಲಾವಣೆಗಳ ಕುರಿತು ಮಾಹಿತಿ ನೀಡಲಾಯಿತು.
ಕೈಗಳ ಶುಚಿತ್ವ, ದೇಹದ ಶುಚಿತ್ವ, ಚರ್ಮದ ಆರೋಗ್ಯ, ಕಾಲುಗಳ ಆರೈಕೆ ಬಾಯಿ ಮತ್ತು ಪೌಷ್ಟಿಕ ಆಹಾರದ ಮಹತ್ವ, ದೇಹದ ಬೆಳವಣಿಗೆ ಕುರಿತು ಮಾಹಿತಿ ನೀಡಿದರು. ಸಮುದಾಯ ವೈದ್ಯಕೀಯ ವಿಭಾಗದ ಡಾ. ಅಫ್ರೋಝ್ ಕಾರ್ಯಕ್ರಮ ನಿರ್ವಹಿಸಿದರು.
