ಹಾವೇರಿ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ, ಫೆ. 23: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಗುರುವಾರ ವರದಿಯಾಗಿದೆ.
ತೊಂಡೂರು ಗ್ರಾಮದ ಹನುಮಂತಗೌಡ ಪಾಟೀಲ್ (54), ಪತ್ನಿ ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ್ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸರು ಗುರುತಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಹನುಮಂತಗೌಡ ಪಾಟೀಲ್ ದಂಪತಿ ಮಗಳ ಮದುವೆ ಖರ್ಚಿಗೆ 25 ಲಕ್ಷ ರೂಪಾಯಿ ಸಾಲ ಮಾಡಿದ್ದರೆನ್ನಲಾಗಿದ್ದು, ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದು ಮಗಳು ನೇತ್ರಾ ಪಾಟೀಲ್ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸವಣೂರು ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಿದ್ದಾರೆ.
Next Story





