ಮಾ. 5ರಂದು ಯಕ್ಷಧ್ರುವ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಳ್ಳಾಲ: ಯಕ್ಷಧ್ರುವ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಲಿ. ಇದರ ಉದ್ಘಾಟನಾ ಸಮಾರಂಭವು ಮಾ. 5 ರಂದು ಸಂಜೆ 5 ಗಂಟೆಗೆ ದೇರಳಕಟ್ಟೆಯ ತಾಜ್ ಟವರ್ಸ್ ನಲ್ಲಿ ನಡೆಯಲಿದ್ದು, ಹೇರಂಭಾ ಇಂಡಸ್ಟ್ರೀಸ್ ಲಿ. ಮತ್ತು ಕೆಮಿನೋ ಫಾರ್ಮಾಲಿ ಇದರ ಅಧ್ಯಕ್ಷರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಉದ್ಘಾಟನೆಯನ್ನು ನೆರವೇರಿಸಲಿದ್ದು , ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಮುಖ್ಯ ಪ್ರವರ್ತಕರಾದ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ.
ಅವರು ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಶಾಸಕ ಯು.ಟಿ.ಖಾದರ್ ವಹಿಸಲಿದ್ದು, ಭದ್ರತಾ ಕೋಶದ ಉದ್ಘಾಟನೆಯನ್ನು ಸಂಸದರಾದ ನಳೀನ್ ಕುಮಾರ್ ಕಟೀಲು ಉದ್ಘಾಟಿಸಿಲಿದ್ದಾರೆ. ಷೇರು ಸರ್ಟೀಫಿಕೇಟ್ ಅನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಡಾ. ಸತೀಶ್ ಭಂಡಾರಿ ಬಿಡುಗಡೆಗೊಳಿಸಲಿದ್ದಾರೆ. ನಿರಖು ಠೇವಣಿ ಪತ್ರದ ಬಿಡುಗಡೆಯನ್ನು ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರು, ಯಕ್ಷಧ್ರುವ ನಗದು ಪತ್ರ ಬಿಡುಗಡೆಯನ್ನು ಸಹಕಾರ ಸಂಘಗಳ ಉಪನಿಬಂಧಕರಾದ ಎಸ್. ಎಸ್ ರಮೇಶ್ ಬಿಡುಗಡೆಗೊಳಿಸಲಿದ್ದಾರೆ. ಮಾಸಿಕ ಠೇವಣಿ ಖಾತೆ ಪುಸ್ತಕ ಬಿಡುಗಡೆಯನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ಹಿರಿಯಾ ವ್ಯವಸ್ಥಾಪಕಾರದ ಗುರುಪ್ರಸಾದ್ ಬಂಗೇರಾ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಇದರ ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್ ಗಣಕಯಂತ್ರ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಬೆಳ್ಮ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್, ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರವರ್ತಕರಾದ ಪುರುಷೋತ್ತಮ ಭಂಡಾರಿ, ರವಿಚಂದ್ರ ಶೆಟ್ಟಿ, ಪ್ರಭಾರ ಪ್ರಧಾನ ವ್ಯವಸ್ಥಾಪಕರಾದ ತನುಜಾ. ಜೆ. ಅಡ್ಯಾಂತ್ತಾಯ , ಸಿಬ್ಬಂದಿ ಆಶ್ವಿತ್ ಶೆಟ್ಟಿ ಉಪಸ್ಥಿತರಿದ್ದರು.







