Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್ ವೈ ಶಿಕಾರಿಪುರದಿಂದಲೇ ಸ್ಪರ್ಧಿಸುವ...

ಬಿಎಸ್ ವೈ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಸಂತೋಷದಿಂದ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

''ಅವರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿದರೆ..."

23 Feb 2023 4:25 PM IST
share
ಬಿಎಸ್ ವೈ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಸಂತೋಷದಿಂದ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ
''ಅವರು ಚುನಾವಣಾ ರಾಜಕಾರಣದಿಂದ ಹಿಂದೆ ಸರಿದರೆ..."

ಬೆಂಗಳೂರು: ''ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವ ನಿರ್ಧಾರ ಕೈಗೊಂಡರೆ ಅದನ್ನು ಸಂತೋಷದಿಂದ ಸ್ವಾಗತಿಸುತ್ತೇನೆ. ನನ್ನ ಸಲಹೆಯನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾರೆಂದು ಭಾವಿಸಿದ್ದೇನೆ'' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ಸರಣಿ  ಟ್ವೀಟ್ ಮಾಡಿರುವ ಅವರು, ''ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವ ಯಡಿಯೂರಪ್ಪನವರು ಮತ್ತೊಮ್ಮೆ ಶಾಸಕರಾಗಿ ಜನಸೇವೆ ಮಾಡಲು ದೈಹಿಕವಾಗಿ ಶಕ್ತರಿದ್ದಾರೆ, ಹೀಗಿದ್ದಾಗ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದರೆ ದಶಕಗಳಿಂದ ಗೆಲ್ಲಿಸುತ್ತಾ ಬಂದಿರುವ ಶಿಕಾರಿಪುರದ ಜನರಿಗೆ ದ್ರೋಹ ಬಗೆದಂತಾಗುವುದಿಲ್ಲವೇ? '' ಎಂದು ಪ್ರಶ್ನೆ ಮಾಡಿದ್ದಾರೆ.

'ಯಡಿಯೂರಪ್ಪನವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ. ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ' ಎಂದು ಹಾರೈಸಿದ್ದಾರೆ. 

''ಬಾದಾಮಿ ಜನರ ಪ್ರೀತಿಗೆ ನಾನು ಸದಾ ಋಣಿ''

''ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ. ಸೋಲುವ ಭಯದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ'' ಎಂದು ಸ್ಪಷ್ಟಪಡಿಸಿದ್ದಾರೆ. 

''ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಶಾಸಕನಾದರೆ ವಾರಕ್ಕೊಮ್ಮೆಯಾದರೂ ಕ್ಷೇತ್ರಕ್ಕೆ ಭೇಟಿಕೊಟ್ಟು, ಜನರ ಕಷ್ಟದಲ್ಲಿ ಭಾಗಿಯಾಗಬೇಕು, ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳಬೇಕು. ಆದರೆ ವಯಸ್ಸು 75 ದಾಟಿದೆ, ದೂರದ ಪ್ರಯಾಣ ಕಷ್ಟವೆನಿಸಿ ಬೆಂಗಳೂರಿಗೆ ಸಮೀಪದ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದೇನೆ'' ಎಂದು ತಿಳಿಸಿದ್ದಾರೆ. 

''ಕಳೆದ 5 ವರ್ಷದಿಂದ ಬಾದಾಮಿ ಕ್ಷೇತ್ರ ಹಿಂದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕಂಡಿದೆ. ನನಗೆ ಮತ ನೀಡಿ ಗೆಲ್ಲಿಸಿದ ಬಾದಾಮಿ ಜನರ ನಂಬಿಕೆಗೆ ಈ 5 ವರ್ಷಗಳಲ್ಲಿ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂಬ ಸಂತೃಪ್ತಿ ನನಗಿದೆ. ಬಾದಾಮಿಯ ಜನರ ಪ್ರೀತಿಗೆ ನಾನು ಸದಾ ಋಣಿ'' ಎಂದು ಹೇಳಿದ್ದಾರೆ. 

ಮಾಜಿ ಮುಖ್ಯಮಂತ್ರಿ @BSYBJP ಅವರು ನನ್ನ ಮೇಲಿನ ಪ್ರೀತಿಯಿಂದ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸಲಹೆ ನೀಡಿದ್ದಾರೆ. ಅವರ ಸಲಹೆಗೆ ಧನ್ಯವಾದ.
ನನ್ನ ಹಿತೈಷಿಯಂತಿರುವ ಯಡಿಯೂರಪ್ಪನವರಿಗೆ ದೇವರು ದೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ. 1/6

— Siddaramaiah (@siddaramaiah) February 23, 2023

ಕಳೆದ 5 ವರ್ಷಗಳಿಂದ ಬಾದಾಮಿಯ ಶಾಸಕನಾಗಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು, ಕ್ಷೇತ್ರದ ಜನರ ಕಷ್ಟ ಸುಖಕ್ಕೆ ನೀಡಿದ ಸ್ಪಂದನೆಯೇ ಅಲ್ಲಿ ನನ್ನನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲಿದೆ ಎಂಬ ಪೂರ್ಣ ಭರವಸೆ ನನಗಿದೆ.
ಸೋಲುವ ಭಯದಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂಬುದು ಕೆಲವರ ಭ್ರಮೆ ಅಷ್ಟೆ. 2/6

— Siddaramaiah (@siddaramaiah) February 23, 2023

ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿರುವ ಯಡಿಯೂರಪ್ಪನವರು ಮತ್ತೊಮ್ಮೆ ಶಾಸಕರಾಗಿ ಜನಸೇವೆ ಮಾಡಲು ದೈಹಿಕವಾಗಿ ಶಕ್ತರಿದ್ದಾರೆ, ಹೀಗಿದ್ದಾಗ ಚುನಾವಣಾ ರಾಜಕಾರಣದಿಂದ ಹಿಂದೆ ಸರಿದರೆ ದಶಕಗಳಿಂದ ಗೆಲ್ಲಿಸುತ್ತಾ ಬಂದಿರುವ ಶಿಕಾರಿಪುರದ ಜನರಿಗೆ ದ್ರೋಹ ಬಗೆದಂತಾಗುವುದಿಲ್ಲವೇ? 5/6

— Siddaramaiah (@siddaramaiah) February 23, 2023
share
Next Story
X