Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರ್ಯಾಯ ವಸತಿ ಒದಗಿಸಲು...

ಪರ್ಯಾಯ ವಸತಿ ಒದಗಿಸಲು ಸಾಧ್ಯವಿಲ್ಲದಿದ್ದರೆ ತಾಜ್‌ ಹೋಟೆಲ್‌ನಲ್ಲಿರಿಸಿ: MMRDAಗೆ ಹೈಕೋರ್ಟ್‌ ತರಾಟೆ

ಪರ್ಯಾಯ ವಸತಿ ಸೌಕರ್ಯ ಒದಗಿಸದೆ 48 ಗಂಟೆಗಳೊಳಗೆ ಮನೆ ತೆರವುಗೊಳಿಸಬೇಕೆಂದಿದ್ದ ಪ್ರಾಧಿಕಾರ

23 Feb 2023 4:30 PM IST
share
ಪರ್ಯಾಯ ವಸತಿ ಒದಗಿಸಲು ಸಾಧ್ಯವಿಲ್ಲದಿದ್ದರೆ ತಾಜ್‌ ಹೋಟೆಲ್‌ನಲ್ಲಿರಿಸಿ: MMRDAಗೆ ಹೈಕೋರ್ಟ್‌ ತರಾಟೆ
ಪರ್ಯಾಯ ವಸತಿ ಸೌಕರ್ಯ ಒದಗಿಸದೆ 48 ಗಂಟೆಗಳೊಳಗೆ ಮನೆ ತೆರವುಗೊಳಿಸಬೇಕೆಂದಿದ್ದ ಪ್ರಾಧಿಕಾರ

ಮುಂಬೈ: ವ್ಯಕ್ತಿಯೊಬ್ಬನಿಗೆ ಪರ್ಯಾಯ ವಸತಿ ಸೌಕರ್ಯ ಒದಗಿಸದೆ ಕೇವಲ 48 ಗಂಟೆಗಳೊಳಗೆ ತಾನಿರುವ ಮನೆಯನ್ನು ತೆರವುಗೊಳಿಸಬೇಕೆಂದು ನೋಟಿಸ್‌ ಜಾರಿಗೊಳಿಸಿದ ಮುಂಬೈ ಮೆಟ್ರೋಪಾಲಿಟನ್‌ ಅಭಿವೃದ್ಧಿ ಪ್ರಾಧಿಕಾರ - ಎಂಎಂಆರ್‌ಡಿಎ ಅನ್ನು ಬಾಂಬೆ ಹೈಕೋರ್ಟ್‌ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

"ಅರ್ಜಿದಾರರು ಮತ್ತಿನ್ನೇನು ಮಾಡಬೇಕು(ನ್ಯಾಯಾಲಯದ ಕದ ತಟ್ಟದೆ)? ಫ್ಲೋರಾ ಫೌಂಟೇನ್‌ ಸಮೀಪ ಭಿಕ್ಷೆ ಬೇಡುವುದೇ? ಅವರಿಗೆ ಪರ್ಯಾಯ ವಸತಿ ಸೌಲಭ್ಯ ಒದಗಿಸಲು ಸಾಧ್ಯವಿಲ್ಲವೆಂದಾದರೆ, ತಾಜ್‌ ಹೋಟೆಲ್‌ನಲ್ಲಿರಿಸಿ ಅವರು ಅಲ್ಲಿ ಉಳಿಯುತ್ತಾರೆ, ತಾಜ್‌ ಹೋಟೆಲ್‌ ಎಂದು ಹೇಳುವಾಗ ನಾವು ಹಳೆಯ ತಾಜ್‌ ಹೋಟೆಲ್‌ ಉಲ್ಳೇಖಿಸುತ್ತಿದ್ದೇವೆ," ಎಂದು ನ್ಯಾಯಮೂರ್ತಿಗಳಾದ ಜಿ ಎಸ್‌ ಪಟೇಲ್‌ ಮತ್ತು ನೀಲಾ ಗೋಖಲೆ ಅವರನ್ನೊಳಗೊಂಡ ಪೀಠ ಹೇಳಿದೆ.

ತಾನು ಕುಟುಂಬದೊಂದಿಗೆ ವಾಸವಿದ್ದ ಫ್ಲ್ಯಾಟ್‌ಗೆ ಎಎಂಆರ್‌ಡಿಎ ಬೀಗ ಜಡಿದಿದೆ ಎಂದು ಆರೋಪಿಸಿ ಸಂತ್ರಸ್ತ ಶೋಭನಾಥ್ ಸಿಂಗ್‌ ನ್ಯಾಯಾಲಯದ ಕದ ತಟ್ಟಿದ್ದರು.

ಫೆಬ್ರವರಿ 8ರಂದು ಜಾರಿಯಾದ ನೋಟಿಸಿನಲ್ಲಿ ಫ್ಲ್ಯಾಟ್‌ ತೆರವುಗೊಳಿಸದೇ ಇದ್ದಲ್ಲಿ ಬಲವಂತವಾಗಿ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.

ತಾನು 2017ರ ತನಕ ಬೇರೊಂದು ಸ್ಥಳದಲ್ಲಿ ವಾಸವಾಗಿದ್ದೆ. ಆದರೆ ಅಲ್ಲಿ ಕೊಳೆಗೇರಿ ಪುನರ್ವಸತಿ ಯೋಜನೆ ಹಾಗೂ ಭೂಗತ ನೀರಿನ ಟ್ಯಾಂಕ್‌ ತಮ್ಮ ನಿವಾಸದ ಸಮೀಪ ಇರುವುದರಿಂದ ಆ ಸ್ಥಳವನ್ನು ಬಿಡುವಂತೆ ಸ್ಪರ್ಕ್‌ ಸಮುದಾಯ ನಿರ್ಮಾಣ್‌ ಎಂಬ ಸಂಸ್ಥೆ ಕೋರಿ ಆ ಯೋಜನೆ ಪೂರ್ಣಗೊಳ್ಳುವ ತನಕ ಪರ್ಯಾಯ ಮನೆಯಲ್ಲಿ ವಾಸಿಸುವಂತೆ ಸೂಚಿಸಲಾಗಿತ್ತು ಆ ವಸತಿ ಸೌಕರ್ಯವೇ ಈಗಿರುವ ಮನೆ ಎಂದು ಅರ್ಜಿದಾರರು ಹೇಳಿದ್ದರು.

share
Next Story
X