Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.1ರಿಂದ ಸರಕಾರಿ ನೌಕರರ...

ಮಾ.1ರಿಂದ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

23 Feb 2023 8:25 PM IST
share
ಮಾ.1ರಿಂದ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಉಡುಪಿ, ಫೆ.23: ಕಳೆದ ಮಂಗಳವಾರ ಜರಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು- ಪದಾಧಿಕಾರಿ ಗಳ ‘ತುರ್ತು ರಾಜ್ಯ ಕಾರ್ಯಕಾರಿಣಿ ಸಭೆ’ಯಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸರಕಾರವನ್ನು ಆಗ್ರಹಿಸಿ ಮಾರ್ಚ್ ಒಂದರಿಂದು ರಾಜ್ಯದ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸರಕಾರಿ ನೌಕರರಲ್ಲಿ ಸಹಜವಾಗಿಯೇನಿರಾಶೆ ಮೂಡಿಸಿದೆ. ರಾಜ್ಯ ಸರಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022ರ ಜುಲೈ1ರಿಂದ ಜಾರಿಗೊಳಿಸಬೇಕಾಗಿತ್ತು.

ರಾಜ್ಯ ಸರಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರಕಾರವು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್ ಅಧ್ಯಕ್ಷತೆ ಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿತ್ತು.

ರಾಜ್ಯ ಸರಕಾರದ ಅಧಿಕಾರಿ-ನೌಕರರು ಹಾಗೂ ಸರಕಾರದ ಅಧೀನ ಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿ ಸುವುದು ಸರಕಾರದ ಜವಾಬ್ದಾರಿಯಾಗಿದ್ದರೂ, ಈ ಬಗ್ಗೆ ನಿರ್ಲಕ್ಷ್ಯ ತಾಳಿರುವುದಕ್ಕೆ  ಸಭೆ ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾ.1ರಿಂದಲೇ ಮುಷ್ಕರ ನಡೆಸಲು ನಿರ್ಧರಿಸಿದೆ. ಇದರಂತೆ ರಾಜ್ಯದ ಸಮಸ್ತ ಸರಕಾರಿ ನೌಕರರು ಮಾ.1ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ ನಡೆಸುವಂತೆ ಕರೆ ನೀಡಲು ನಿರ್ಣಯ ಕೈಗೊಂಡಿದೆ.

ಸಂಘದ ಪ್ರಮುಖ ಬೇಡಿಕೆಗಳು: ರಾಜ್ಯ ಸರಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರು 2022ರ ಜು.1ರಿಂದ  ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿ ಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು 2022ರ ಜು.1ರಿಂದ ಜಾರಿಗೆ ಬರುವಂತೆ ಸರಕಾರಿ ಆದೇಶ ಹೊರಡಿಸಬೇಕು.

ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿ ರುವುದರಿಂದ ಎನ್‌ಪಿಎಸ್. ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರಬೇಕು. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸ್‌ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ಬಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. 

ಆದ್ದರಿಂದ ಮಾ.1ರಿಂದ ಜಿಲ್ಲೆಯ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ವನ್ನು ಬೆಂಬಲಿಸು ವುದೊಂದರಿಗೆ ಯಶಸ್ವಿಗೊಳಿಸಲು ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆಯ ಎಲ್ಲಾ ಸರಕಾರಿ ಅಧಿಕಾರಿ-ನೌಕರರಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

share
Next Story
X