ಬೆಂಗಳೂರು | ಮಕ್ಕಳಿಗೆ ನಿದ್ದೆ ಬರುವ ಔಷಧಿ ನೀಡಿ ಭಿಕ್ಷಾಟನೆ ಮಾಡಿಸುತ್ತಿದ್ದ ಜಾಲ ಪತ್ತೆ: 55 ಮಂದಿ ಭಿಕ್ಷುಕರ ರಕ್ಷಣೆ

ಬೆಂಗಳೂರು, ಫೆ.23: ಮಹಿಳೆಯರನ್ನು ಬಾಡಿಗೆ ಇಲ್ಲವೇ ಕಳ್ಳಸಾಗಣೆ ಮೂಲಕ ಕರೆತಂದು ಮಕ್ಕಳಿಗೆ ನಿದ್ದೆ ಬರುವ ಔಷಧಿ ನೀಡಿ ಮಲಗಿಸಿ ಭಿಕ್ಷಾಟನೆ ಮಾಡಿಸುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು 55 ಮಂದಿಯನ್ನು ರಕ್ಷಿಸಿದ್ದಾರೆ.
ನಗರದ ಕೇಂದ್ರ, ಉತ್ತರ,ದಕ್ಷಿಣ, ಪೂರ್ವ, ಪಶ್ಚಿಮ, ಈಶಾನ್ಯ, ಆಗ್ನೇಯ, ವೈಟ್ ಫೀಲ್ಡ್ ವಿಭಾಗದಲ್ಲಿ 14 ತಂಡಗಳ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ 3 ಹುಡುಗರು, 5 ಹುಡುಗಿಯರು, ತಾಯಿ ಮತ್ತು ಮಕ್ಕಳು, 18 ಹೆಂಗಸರು, 5 ಗಂಡಸರು 7 ಸೇರಿ 55 ಮಂದಿ ಭಿಕ್ಷುಕರನ್ನು ರಕ್ಷಿಸಲಾಗಿದೆ.
ರಕ್ಷಣೆ ಮಾಡಲ್ಪಟ್ಟ ಎಲ್ಲರನ್ನೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಇನ್ನೂ, ನಗರದ ಎಲ್ಲ ಪ್ರಮುಖ ಸ್ಥಳಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಭಿಕ್ಷಾಟನೆ ಮಾಡುತ್ತಿದ್ದ ಜಾಲವನ್ನು ಬೇಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.
Next Story





