Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ ಆರ್ಥಿಕವಾಗಿ ಬಲಿಷ್ಠ; ಅದರೊಂದಿಗೆ...

ಚೀನಾ ಆರ್ಥಿಕವಾಗಿ ಬಲಿಷ್ಠ; ಅದರೊಂದಿಗೆ ಜಗಳ ಅಸಾಧ್ಯ: ವಿದೇಶ ಸಚಿವ ಎಸ್. ಜೈಶಂಕರ್

23 Feb 2023 10:20 PM IST
share
ಚೀನಾ ಆರ್ಥಿಕವಾಗಿ ಬಲಿಷ್ಠ; ಅದರೊಂದಿಗೆ ಜಗಳ ಅಸಾಧ್ಯ: ವಿದೇಶ ಸಚಿವ ಎಸ್. ಜೈಶಂಕರ್

ಹೊಸದಿಲ್ಲಿ, ಫೆ. 23: ಚೀನಾ ಬಲಿಷ್ಠ ಆರ್ಥಿಕತೆ ಹೊಂದಿರುವ ದೇಶವಾಗಿದೆ; ಹಾಗಾಗಿ ಗಡಿ ಒಪ್ಪಂದಗಳನ್ನು ಉಲ್ಲಂಘಿಸುವ ಮೂಲಕ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಚೀನಾ ನಿರ್ಮಿಸುತ್ತಿರುವ ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುವ ಕೆಲಸವನ್ನಷ್ಟೇ ನಾವು ಮಾಡುತ್ತಿದ್ದೇವೆ ಎಂದು ಭಾರತದ ವಿದೇಶ ಸಚಿವ ಎಸ್. ಜೈಶಂಕರ್(S. Jaishankar) ಹೇಳಿದ್ದಾರೆ.

‘‘ಅವರು ಬಲಿಷ್ಠ ಆರ್ಥಿಕತೆ ಹೊಂದಿರುವ ದೇಶ. ನಾನು ಏನು ಮಾಡಲಿ? ನನ್ನದು ಸಣ್ಣ ಆರ್ಥಿಕತೆ ಹೊಂದಿರುವ ಬಡ ದೇಶ. ಬಲಿಷ್ಠ ಆರ್ಥಿಕತೆ ಹೊಂದಿರುವ ದೇಶದೊಂದಿಗೆ ನಾನು ಜಗಳ ಮಾಡಲು ಸಾಧ್ಯವೇ? ಘಟನೆಗಳಿಗೆ ಪ್ರತಿಕ್ರಿಯೆ ಮಾತ್ರ ನೀಡುತ್ತಿದ್ದೇವೆ ಎಂದು ಹೇಳಬಾರದು. ಇದು ಸಾಮಾನ್ಯ ಜ್ಞಾನ. ಗಡಿಗಳಿಗೆ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಾವು ಕಳುಹಿಸುವಂತಿಲ್ಲ. ಇದಕ್ಕೆ ನಾವು ಬದ್ಧರಾಗಿದ್ದೇವೆ. ಯಾಕೆಂದರೆ, ನಮ್ಮ ಗಡಿಗಳಲ್ಲಿ ಸ್ಥಿರತೆ ಕಾಪಾಡುವುದು ನಮ್ಮ ಹಿತಾಸಕ್ತಿಗೆ ಪೂರಕವಾಗಿದೆ. ಪ್ರೀತಿ, ವಾತ್ಸಲ್ಯ ಅಥವಾ ಭಾವನೆಗಳು ತುಂಬಿರುವ ಪರಿಸ್ಥಿತಿ ನಮಗೆ ಬೇಕಾಗಿದೆ. ಈ ಎಲ್ಲಾ ಲೆಕ್ಕಾಚಾರಗಳನ್ನು ನಾವು ಮಾಡಿದ್ದೇವೆ’’ ಎಂದು ಎಎನ್‌ಐ ಸುದ್ದಿಸಂಸ್ಥೆಯ ಸ್ಮಿತಾ ಪ್ರಕಾಶ್‌ಗೆ ನೀಡಿದ ಸಂದರ್ಶನವೊಂದರಲ್ಲಿ ವಿದೇಶ ಸಚಿವರು ಹೇಳಿದ್ದಾರೆ.

ನಿಶ್ಶರ್ತ ಶರಣಾಗತಿಗೂ ಉತ್ತಮ ಪದಗಳನ್ನು ಬಳಸಲಾಗುತ್ತದೆ: ವಿದೇಶ ಸಚಿವರ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ಚೀನಾದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿ ಇತ್ತೀಚೆಗೆ ನೀಡಿರುವ ಹೇಳಿಕೆಗಾಗಿ ವಿದೇಶ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ‘‘ನಿಶ್ಶರ್ತ ಶರಣಾಗತಿಗೂ ಇದಕ್ಕಿಂತ ಉತ್ತಮ ಪದಗಳನ್ನು ಬಳಸಲಾಗುತ್ತದೆ’’ ಎಂದು ಹೇಳಿದ್ದಾರೆ.

‘‘ಸಚಿವ ಎಸ್. ಜೈಶಂಕರ್ ಅವರೇ, ನಿಶ್ಶರ್ತ ಶರಣಾಗತಿಯಾದರೂ ಅದನ್ನು ವಿವರಿಸಲು ಕನಿಷ್ಠ ಉತ್ತಮ ಪದಗಳನ್ನಾದರೂ ಬಳಸಲಾಗುತ್ತದೆ. ನಿಮ್ಮದು ಸೋಲು ಒಪ್ಪಿಕೊಂಡಿರುವ ಮನೋಸ್ಥಿತಿ. ಹಾಗಾಗಿ, 2020 ಸೆಪ್ಟಂಬರ್‌ನಿಂದಲೂ ಸಂಸತ್‌ನಲ್ಲಿ ಚೀನಾ ಕುರಿತ ಚರ್ಚೆಯಿಂದ ಪಲಾಯನಗೈಯುತ್ತಾ ಬಂದಿರುವುದರಲ್ಲಿ ಅಚ್ಚರಿಯೇನಿಲ್ಲ’’ ಎಂಬುದಾಗಿ ತಿವಾರಿ ಟ್ವೀಟ್ ಮಾಡಿದ್ದಾರೆ.

share
Next Story
X