Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಐಎಯಿಂದ ದೇಶಾದ್ಯಂತ ದಾಳಿ:...

ಎನ್‌ಐಎಯಿಂದ ದೇಶಾದ್ಯಂತ ದಾಳಿ: ಖಲಿಸ್ತಾನ್ ಸಿದ್ಧಾಂತಿ, ಕ್ರಿಮಿನಲ್‌ಗಳು ಸೇರಿ ಆರು ಮಂದಿಯ ಬಂಧನ

23 Feb 2023 10:31 PM IST
share
ಎನ್‌ಐಎಯಿಂದ ದೇಶಾದ್ಯಂತ ದಾಳಿ: ಖಲಿಸ್ತಾನ್ ಸಿದ್ಧಾಂತಿ, ಕ್ರಿಮಿನಲ್‌ಗಳು ಸೇರಿ ಆರು ಮಂದಿಯ ಬಂಧನ

ಹೊಸದಿಲ್ಲಿ,ಫೆ.23: ಕ್ರಿಮಿನಲ್ ಗ್ಯಾಂಗ್‌ಗಳು,ಭಯೋತ್ಪಾದಕ ಗುಂಪುಗಳು ಮತ್ತು ಡ್ರಗ್ ಮಾಫಿಯಾ ನಡುವಿನ ಅಪವಿತ್ರ ಮೈತ್ರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕೆನಡಾ ಮೂಲದ ಘೋಷಿತ ಭಯೋತ್ಪಾದಕ ಅರ್ಷದೀಪ್ ಸಿಂಗ್ ಅಲಿಯಾಸ್ ಅರ್ಷ ದಲಾನ ನಿಕಟವರ್ತಿ ಲಕಿ ಖೋಖರ್ ಅಲಿಯಾಸ್ ಡೆನಿಸ್ ಸೇರಿದಂತೆ ಆರು ಜನರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯು ಬಂಧಿಸಿದೆ ಎಂದು ಅಧಿಕೃತ ವಕ್ತಾರರು ಗುರುವಾರ ತಿಳಿಸಿದರು.

ಎನ್‌ಐಎ ಮಂಗಳವಾರ ದೇಶದ ಎಂಟು ರಾಜ್ಯಗಳಲ್ಲಿಯ 76 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಿತ್ತು. ಲಖವೀರ್ ಸಿಂಗ್,ಹರ್ಪ್ರೀತ್,ದಲೀಪ್ ಬಿಷ್ಣೋಯಿ,ಸುರಿಂದರ್ ಅಲಿಯಾಸ್ ಚಿಕು ಚೌಧರಿ ಮತ್ತು ಹರಿ ಓಂ ಅಲಿಯಾಸ್ ಟಿಟು ಇತರ ಬಂಧಿತರಾಗಿದ್ದು,ಇವರೆಲ್ಲ ಗ್ಯಾಂಗ್‌ಸ್ಟರ್‌ಗಳಾದ ಲಾರೆನ್ಸ್ ಬಿಷ್ಣೋಯಿ,ಜಗ್ಗು ಭಗವಾನಪುರಿಯಾ ಮತ್ತು ಗೋಲ್ಡಿ ಬ್ರಾರ್ ಅವರ ಸಹಚರರಾಗಿದ್ದಾರೆ.

ಪಂಜಾಬಿನ ಬಠಿಂಡಾ ನಿವಾಸಿಯಾಗಿರುವ ಖೋಖರ್‌ನನ್ನು ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಬಂಧಿಸಲಾಗಿದೆ. ಅರ್ಷದೀಪ್ ಜೊತೆ ನೇರ ಸಂಪರ್ಕ ಹೊಂದಿದ್ದ ಈತ ಆತನ ಗ್ಯಾಂಗ್‌ಗಾಗಿ ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದ್ದ ಮತ್ತು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಿಗೆ ಹಣವನ್ನು ಸಂಗ್ರಹಿಸುತ್ತಿದ್ದ. ಖೋಖರ್ ಪಂಜಾಬಿನಲ್ಲಿಯ ಅರ್ಷದೀಪ್‌ನ ಸಹಚರರಿಗೆ ಶಸ್ತ್ರಾಸ್ತ್ರಗಳನ್ನೂ ಪೂರೈಸಿದ್ದು,ಅರ್ಷದೀಪ್ ನಿರ್ದೇಶನದ ಮೇರೆಗೆ ಇತ್ತೀಚಿಗೆ ಜಗ್ರಾಂವ್‌ನಲ್ಲಿ ಕೊಲೆಯೊಂದನ್ನು ನಡೆಸಲು ಅವುಗಳನ್ನು ಬಳಸಲಾಗಿತ್ತು ಎಂದು ಎನ್‌ಐಎ ತಿಳಿಸಿದೆ.

ಹರ್ವಿಂದರ್ ಸಿಂಗ್ ಅಲಿಯಾಸ್ ರಿಂದಾ,ಲಖಬೀರ ಸಿಂಗ್ ಸಂಧು ಅಲಿಯಾಸ್ ಲಾಂಡಾ ಮತ್ತು ಅರ್ಷದೀಪ್ ಸಿಂಗ್ ಸೇರಿದಂತೆ ಏಳು ಜನರ ವಿರುದ್ಧ ಎನ್‌ಐಎ ಕಳೆದ ವರ್ಷದ ಆ.20ರಂದು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ ರಂಗಾ ಎಂಬಾತನನ್ನು ಎನ್‌ಐಎ ಈ ಹಿಂದೆಯೇ ಬಂಧಿಸಿತ್ತು.

ಅರ್ಷದೀಪ್ ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಗಡಿಗಳ ಮೂಲಕ ಭಾರತದಲ್ಲಿ ಖಲಿಸ್ತಾನ್ ಲಿಬರೇಷನ್ ಫೋರ್ಸ್, ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ ಮತ್ತು ಇಂಟರ್‌ನ್ಯಾಷನಲ್ ಸಿಖ್ ಯೂಥ್ ಫೆಡರೇಷನ್ ಸೇರಿದಂತೆ ಹಲವು ನಿಷೇಧಿತ ಭಯೋತ್ಪಾದಕ ಸಂಘಟನೆಗಳಿಗಾಗಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು,ಸ್ಫೋಟಕಗಳು ಮತ್ತು ಐಇಡಿಗಳ ಕಳ್ಳಸಾಗಾಣಿಕೆಯಲ್ಲಿ ತೊಡಗಿಕೊಂಡಿದ್ದು,ಖೋಖರ್ ಆತನಿಗಾಗಿ ಕೆಲಸ ಮಾಡುತ್ತಿದ್ದ ಎಂದು ಎನ್‌ಐಎ ವಕ್ತಾರರು ತಿಳಿಸಿದರು.

ಭಾರತದಲ್ಲಿ ಪ್ರಮುಖ ಗ್ಯಾಂಗ್‌ಸ್ಟರ್‌ಗಳಾಗಿದ್ದ ಹಲವಾರು ಕ್ರಿಮಿನಲ್‌ಗಳು ಪಾಕಿಸ್ತಾನ,ಕೆನಡಾ,ಮಲೇಶಿಯಾ,ಫಿಲಿಪ್ಪೀನ್ಸ್ ಮತ್ತು ಆಸ್ಟ್ರೇಲಿಯಾಗಳಂತಹ ದೇಶಗಳಿಗೆ ಪರಾರಿಯಾಗಿದ್ದು, ಅಲ್ಲಿಂದಲೇ ವಿವಿಧ ರಾಜ್ಯಗಳ ಜೈಲುಗಳಲ್ಲಿರುವ ಕ್ರಿಮಿನಲ್‌ಗಳೊಂದಿಗೆ ಸೇರಿಕೊಂಡು ಭಯೋತ್ಪಾದಕ ಮತ್ತು ಕ್ರಿಮಿನಲ್ ಕೃತ್ಯಗಳಿಗೆ ಯೋಜನೆಗಳನ್ನು ರೂಪಿಸುತ್ತಿದ್ದರು ಎನ್ನುವುದು ಎನ್‌ಐಎದ ಈವರೆಗಿನ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

share
Next Story
X