ಉಪ ಲೋಕಾಯುಕ್ತ-2 ಹುದ್ದೆ ಭರ್ತಿಗೆ ಕೋರಿದ ಅರ್ಜಿ: ಹೈಕೋರ್ಟ್ ನಿಂದ ನೋಟಿಸ್ ಜಾರಿ

ಬೆಂಗಳೂರು, ಫೆ.23: ಖಾಲಿ ಇರುವ ಎರಡನೆ ಉಪ ಲೋಕಾಯುಕ್ತ ಹುದ್ದೆ ಭರ್ತಿಗೆ ನಿರ್ದೇಶಿಸಬೇಕು ಎಂಬ ಕೋರಿಕೆಯ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಕುರಿತಂತೆ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಸರಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ನ್ಯಾ.ಬಿ.ಎಸ್.ಪಾಟೀಲ್ ಅವರು ಎರಡನೆ ಉಪ ಲೋಕಾಯುಕ್ತರಾಗಿ 2016ರ ನವೆಂಬರ್ 20ರಂದು ನೇಮಕಗೊಂಡಿದ್ದರು. ನಂತರ ಅವರೇ 2022ರ ಜೂ.14ರಂದು ಲೋಕಾಯುಕ್ತರಾಗಿ ನೇಮಕಗೊಂಡರು. ಅಂದಿನಿಂದ ಎರಡನೆ ಉಪ ಲೋಕಾಯುಕ್ತರ ಹುದ್ದೆ ಖಾಲಿಯಿದ್ದು, ಈವರೆಗೂ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
Next Story