ರಾಮನಗರ: ಪತಿಯಿಂದ ಪತ್ನಿಯ ಕೊಲೆ: ಆರೋಪಿ ಪೊಲೀಸ್ ವಶಕ್ಕೆ

ರಾಮನಗರ, ಫೆ.24: ಕ್ಷುಲ್ಲಕ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ರಾಮನಗರ ಟೌನ್ ನ ಕೊಂಕಾಣಿದೊಡ್ಡಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ.
ಕೊಲೆಯಾದವರನ್ನು ಗೌರಮ್ಮ(45) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪತಿ ರವಿ(52)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ರವಿಯು ಗೌರಮ್ಮರನ್ನು ಕೊಲೆಗೈದು ಅಂತ್ಯ ಸಂಸ್ಕಾರ ಮಾಡಲು ಸಿದ್ದತೆ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ ಮಾಹಿತಿ ಮೇರೆಗೆ ರವಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ರಾಮನಗರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story