Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ಅತ್ಯಂತ ಸ್ಫೂರ್ತಿದಾಯಕ...

ನನಗೆ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ: ಬಿಎಸ್​ವೈ 'ವಿದಾಯ' ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ

24 Feb 2023 12:34 PM IST
share
ನನಗೆ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ: ಬಿಎಸ್​ವೈ ವಿದಾಯ ಭಾಷಣ ಹಂಚಿಕೊಂಡ ಪ್ರಧಾನಿ ಮೋದಿ

ಬೆಂಗಳೂರು, ಫೆ. 24: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿಧಾನಸಭಾ ಕಲಾಪದಲ್ಲಿ ವಿದಾಯದ ಮಾತಗಳನ್ನು ಆಡಿದ್ದರು. ಇದೀಗ ಯಡಿಯೂರಪ್ಪ ಅವರ ಭಾಷಣಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಅವರ ಭಾಷಣದ ವಿಡಿಯೋ ಟ್ವಟರ್ ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ''ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ'' ಎಂದು ಬರೆದುಕೊಂಡಿದ್ದಾರೆ. 

ಇನ್ನು ಪ್ರಧಾನಿ ಮೋದಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಬಿಎಸ್ ವೈ, ''ತಮ್ಮ ಆತ್ಮೀಯ ಹಾರೈಕೆಗಳಿಗೆ ಧನ್ಯವಾದಗಳು ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ! ತಮ್ಮ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಕೂಡ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ, ಇನ್ನಷ್ಟು ಹುಮ್ಮಸ್ಸಿನಿಂದ ನಿರಂತರ ಕೆಲಸ ಮಾಡಲಿದ್ದೇವೆ'' ಎಂದು ಹೇಳಿದ್ದಾರೆ.  

||ಯಡಿಯೂರಪ್ಪ ಅವರ ಭಾಷಣದ ಪ್ರಮುಖ ಅಂಶಗಳು

'ಬಿಜೆಪಿ ಯಡಿಯೂರಪ್ಪನವರನ್ನು ಕಡೆಗಣಿಸಿದೆ ಎಂದು ವಿಪಕ್ಷಗಳ ಆರೋಪ ಮಾಡುತ್ತಿವೆ. ಆದರೆ, ಬಿಜೆಪಿ ಅಥವಾ ಪ್ರಧಾನಿ ಮೋದಿ ನನ್ನನ್ನು ಕಡೆಗಣಿಸಿಲ್ಲ. ಇದುವರೆಗೆ ಹಲವು ಅವಕಾಶಗಳನ್ನು ನನಗೆ ನೀಡಿವೆ. ಹೀಗಾಗಿ ಪಕ್ಷ ಹಾಗೂ ಮೋದಿಯವರಿಗೆ ನಾನು ಋಣಿಯಾಗಿದ್ದೇನೆ' ಎಂದು ಹೇಳಿದ್ದರು. 

‘ನನ್ನ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಸಿಎಂ ಆಗುವ ಅವಕಾಶವನ್ನು ಬಿಜೆಪಿ ನನಗೆ ಕೊಟ್ಟಿದೆ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇನೆ. ಆದರೆ, ಈ ಯಡಿಯೂರಪ್ಪ ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುವೆ ಎಂದ ಅವರು, ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದ್ದರು.

ಈ ಹಿಂದಿನ ಯಾವುದೇ ಸರಕಾರಗಳು ನೀಡದಷ್ಟು ಯೋಜನೆಗಳನ್ನು ಬಿಜೆಪಿ ಸರಕಾರ ಕೊಟ್ಟಿದೆ. ಹೀಗಾಗಿ ನಮ್ಮ ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ರಾಜ್ಯದ ಬಜೆಟ್ ಎಲ್ಲ ವರ್ಗದ ಜನರನ್ನು ತಲುಪುವ ಬಜೆಟ್ ಆಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಪ್ರಯತ್ನ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

'ನೆರೆಯ ರಾಜ್ಯಗಳಿಗೆ ಮಾದರಿ ರೀತಿಯಲ್ಲಿ 402 ಕೋಟಿ ರೂ.ಮೊತ್ತದ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಿದ್ದು, ದೂರಗಾಮಿ ಅಭಿವೃದ್ಧಿಗೆ ಪೂರಕ ಬಜೆಟ್ ಇದಾಗಿದೆ. ರೈಲ್ವೆ, ರಸ್ತೆ, ವಿದ್ಯುತ್ ಸಹಿತ ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದು, ಡಬಲ್ ಇಂಜಿನ್ ಸರಕಾರದ ಇರುವ ಕಾರಣದಿಂದಲೇ ರಾಜ್ಯ ಹಾಗೂ ದೇಶ ಸದೃಢವಾಗಿದ್ದು, ವಿಕಾಸ ಹೊಂದುತ್ತಿದೆ' ಎಂದು ಯಡಿಯೂರಪ್ಪ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. 

ಇದನ್ನೂ ಓದಿ: 'ಉತ್ತಮ ಪ್ರಜಾಕೀಯ ಪಕ್ಷ'ಕ್ಕೆ ''ಆಟೋ ರಿಕ್ಷಾ'' ಚಿಹ್ನೆ ನೀಡಿದ ಚುನಾವಣಾ ಆಯೋಗ: ನಟ ಉಪೇಂದ್ರ ಟ್ವೀಟ್ 

ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ. https://t.co/tdpgUXqRAz

— Narendra Modi (@narendramodi) February 24, 2023

ತಮ್ಮ ಆತ್ಮೀಯ ಹಾರೈಕೆಗಳಿಗೆ ಧನ್ಯವಾದಗಳು ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ರವರೇ! ತಮ್ಮ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಕೂಡ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ, ಇನ್ನಷ್ಟು ಹುಮ್ಮಸ್ಸಿನಿಂದ ನಿರಂತರ ಕೆಲಸ ಮಾಡಲಿದ್ದೇವೆ. https://t.co/akvTnLjgSR

— B.S.Yediyurappa (@BSYBJP) February 24, 2023
share
Next Story
X