Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು...

ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು 'ಪ್ರಗತಿ ರಥಯಾತ್ರೆ': ಸಿಎಂ ಬೊಮ್ಮಾಯಿ

''ರಾಜ್ಯದೆಲ್ಲೆಡೆ 130ಕ್ಕೂ ಹೆಚ್ಚು ರಥಗಳು ಸಂಚರಿಸಲಿವೆ''

24 Feb 2023 2:54 PM IST
share
ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಯಾತ್ರೆ: ಸಿಎಂ ಬೊಮ್ಮಾಯಿ
''ರಾಜ್ಯದೆಲ್ಲೆಡೆ 130ಕ್ಕೂ ಹೆಚ್ಚು ರಥಗಳು ಸಂಚರಿಸಲಿವೆ''

ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರವು ಸಂಕಲ್ಪದಿಂದ ಸಿದ್ಧಿಗೆ ಮುಂದಾಗಿದೆ. ಅದಕ್ಕಾಗಿ ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಗಳನ್ನು ಜನರ ಬಳಿಗೆ ಒಯ್ಯುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. 

“ಬಿಟಿಎಂ ಲೇಔಟ್‍ನ 2ನೇ ಹಂತದ ಸ್ವಾಮಿ ವಿವೇಕಾನಂದ ಆಟದ ಮೈದಾನ”ದಲ್ಲಿ ಇಂದು ಬಿಜೆಪಿ ಪ್ರಗತಿ ರಥದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಥ ವಾಪಸ್ ಬರುವಾಗ ಸಂಕಲ್ಪ ಸಿದ್ಧಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕಿದೆ. ರಾಜ್ಯ ಸರಕಾರವು ಆರ್ಥಿಕ ಚೇತರಿಕೆ ಮಾತ್ರವಲ್ಲದೆ ಜನಕಲ್ಯಾಣ ಕಾರ್ಯಕ್ರಮಗಳನ್ನು ಮಾಡಿದೆ. ನಮ್ಮ ಕ್ಲಿನಿಕ್, ಶಾಲೆಗಳ ಸುಧಾರಣೆ, ನಗರೋತ್ಥಾನಕ್ಕೆ 6 ಸಾವಿರ ಕೋಟಿ ನೀಡಿದ್ದೇವೆ. ಸಬರ್ಬನ್ ರೈಲಿಗೆ ಅತಿ ಹೆಚ್ಚು ಹಣ ಕೊಡಲಾಗಿದೆ. ಸೆಟಲೈಟ್ ಟೌನ್, ರಿಂಗ್ ರೋಡ್‍ಗೆ ಹಣ ನೀಡಿದ್ದಾರೆ. ಕೆಲಸವೂ ನಡೆಯುತ್ತಿದೆ. ಇದರದಲ್ಲಿ ಸಂಸದರ ಪಾತ್ರ ಪ್ರಮುಖ ಎಂದು ಮೆಚ್ಚುಗೆ ಸೂಚಿಸಿದರು.

ರೈಲ್ವೆಸ್‍ಗೆ, ರಾಷ್ಟ್ರೀಯ ಹೆದ್ದಾರಿಗೂ ಗರಿಷ್ಠ ಹಣ ಬಂದಿದೆ. ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ. ಮೋದಿಜಿ ಸರಕಾರವು ಪ್ರಬಲ ದೇಶವಾಗಿ ಹೊರಹೊಮ್ಮಲು ಕಾರಣರಾಗಿದೆ ಎಂದು ವಿವರಿಸಿದರು.

ರಾಜ್ಯ ಸರಕಾರದಿಂದ ರೈತ ವಿದ್ಯಾನಿಧಿ ನೀಡಲಾಗುತ್ತಿದೆ. ನೇಕಾರರು, ಟೇಲರ್, ಆಟೋ ಡ್ರೈವರ್ ಮಕ್ಕಳು ಸೇರಿ ಅನೇಕ ಸಮುದಾಯಕ್ಕೆ ಇದನ್ನು ವಿಸ್ತರಿಸಲಾಗಿದೆ. ಯುವಕರಿಗೆ ಬ್ಯಾಂಕ್ ನೆರವು ಲಭಿಸಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯೋಜನೆ, ಹೆಣ್ಮಕ್ಕಳಿಗೆ ಪ್ರತ್ಯೇಕ ಯೋಜನೆ, ವಿದ್ಯಾರ್ಥಿನಿಯರ ಶುಲ್ಕ ಮನ್ನಾ, ಉಚಿತ ಪಾಸ್ ನೀಡಲಾಗುತ್ತಿದೆ. ಐಟಿಐ ಟ್ರೈನಿಂಗ್ ಪಡೆಯುವವರಿಗೆ ಸ್ಟೈಫಂಡ್ ಕೊಡಲಾಗುವುದು, ಬಡವರ ಕಲ್ಯಾಣ, ರಾಜ್ಯದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತಿದ್ದೇವೆ. ಜನರೂ ಬಿಜೆಪಿ ಮೇಲೆ ಭರವಸೆ ಇಟ್ಟಿದ್ದಾರೆ. ಇದು ಗೆಲುವಿನ ಸಂಕೇತ. ಕರ್ನಾಟಕದಲ್ಲಿ ಬಿಜೆಪಿ ಸುನಾಮಿ ಏಳಲಿ ಎಂದು ಆಶಿಸಿದರು.

ಬೆಂಗಳೂರು ದಕ್ಷಿಣ ಸಂಸದ ಮತ್ತು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿಸೂರ್ಯ ಅವರು ಮಾತನಾಡಿ, ಡಬಲ್ ಎಂಜಿನ್ ಸರಕಾರಗಳ ಕೊಡುಗೆಯನ್ನು ತಿಳಿಸಲು ರಥವು ನೆರವಾಗಲಿದೆ. 130ಕ್ಕೂ ಹೆಚ್ಚು ರಥಗಳು ರಾಜ್ಯದೆಲ್ಲೆಡೆ ಸಂಚರಿಸಲಿವೆ ಎಂದು ತಿಳಿಸಿದರು.

ಕೋವಿಡ್, ಅತಿವೃಷ್ಟಿಯ ನಡುವೆಯೂ ಅಭೂತಪೂರ್ವ ವಿಕಾಸ ಸಾಧ್ಯವಾಗಿದೆ. ನೀರಾವರಿ ಯೋಜನೆಗೆ ಶಾಶ್ವತ ಪ್ರಯತ್ನ ಮಾಡಿದ್ದೇವೆ. ನಗರವೊಂದರಲ್ಲೇ 1 ಕೋಟಿ ಲಾಭಾರ್ಥಿಗಳು ನಮ್ಮ ನಗರದಲ್ಲಿದ್ದಾರೆ. ಅಭಿವೃದ್ಧಿಯ ವೇಗದ ವಿಚಾರವನ್ನು ಜನರಿಗೆ ತಿಳಿಸಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಎಂ.ಸತೀಶ್ ರೆಡ್ಡಿ, ವಿಧಾನಪರಿಷತ್ ಸದಸ್ಯ ಮತ್ತು ಬೆಂಗಳೂರು ವಿಭಾಗ ಪ್ರಭಾರಿ ಗೋಪಿನಾಥ್ ರೆಡ್ಡಿ, ಪ್ರಗತಿ ರಥದ ರಾಜ್ಯ ಸಂಚಾಲಕ ಎಸ್.ವಿ. ರಾಘವೇಂದ್ರ, ಯುವ ಮೋರ್ಚಾದ ರಾಜ್ಯ ಅಧ್ಯಕ್ಷ ಡಾ.ಸಂದೀಪ್, ನಗರ ಜಿಲ್ಲಾ ಅಧ್ಯಕ್ಷರಾದ ಡಾ.ಎನ್.ಆರ್.ರಮೇಶ್, ನಾರಾಯಣಗೌಡ, ಮಂಜುನಾಥ್, ಶಾಸಕರು ಹಾಗೂ ಪಕ್ಷದ ರಾಜ್ಯ, ಜಿಲ್ಲಾ ಮತ್ತು ಸ್ಥಳೀಯ ಮುಖಂಡರು ಮುಖಂಡರು ಭಾಗವಹಿಸಿದ್ದರು.

share
Next Story
X