ಆಂಧ್ರಪ್ರದೇಶದ ನೂತನ ರಾಜ್ಯಪಾಲ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ರಿಗೆ ಅಭಿನಂದನೆ

ಉಡುಪಿ: ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಇವರು ಇಂದು ಅಧಿಕಾರ ಸ್ವೀಕರಿಸಿದರು. ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣವಚನ ಬೋಧಿಸಿದರು.
ನೂತನ ರಾಜ್ಯಪಾಲರಿಗೆ ಆಂಧ್ರಪ್ರದೇಶದ ರಾಜಧಾನಿಯಾಗಿರುವ ವಿಜಯವಾಡದಲ್ಲಿರುವ ರಾಜಭವನದಲ್ಲಿ ಉಡುಪಿ ವಕೀಲರ ಸಂಘದ ವತಿಯಿಂದ ಪುಷ್ಪಗುಚ್ಚ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ಟಿ.ವಿಜಯ ಕುಮಾರ ಶೆಟ್ಟಿ, ಹಿರಿಯ ನ್ಯಾಯವಾದಿ ಗಂಗಾಧರ ಎಚ್.ಎಂ. ಉಪಸ್ಥಿತರಿದ್ದರು.
Next Story





