ಬ್ರಹ್ಮಾವರ: ತಾಲೂಕು ಮಿನಿ ವಿಧಾನಸೌಧ ಉದ್ಘಾಟನೆಗೆ ಸಚಿವ ಅಶೋಕ್

ಬ್ರಹ್ಮಾವರ: ಬ್ರಹ್ಮಾವರದಲ್ಲಿ ನಿರ್ಮಿಸಿರುವ ನೂತನ ತಾಲೂಕು ಆಡಳಿತ ಸೌಧ (ಮಿನಿ ವಿಧಾನಸೌಧ)ವನ್ನು ಮುಂದಿನ ಮಾರ್ಚ್ ತಿಂಗಳಲ್ಲಿ ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಉದ್ಘಾಟಿಸಲಿದ್ದಾರೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಉದ್ಘಾಟನಾ ಸಮಾರಂಭದ ಪೂರ್ವ ತಯಾರಿ ಬಗ್ಗೆ ಇಂದು ಇಲ್ಲಿ ಕರೆದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ರಘುಪತಿ ಭಟ್ ಈ ವಿಷಯ ತಿಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ ಮೂರ್ತಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸಹನಾ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ತಾಲೂಕು ಆರೋಗ್ಯಾಧಿಕಾರಿ ವಾಸುದೇವ ಉಪಾಧ್ಯಾಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
Next Story





