Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಂದಾಯ ಇಲಾಖೆಯ ನಿರ್ದೇಶನ ಪಾಲಿಸದ...

ಕಂದಾಯ ಇಲಾಖೆಯ ನಿರ್ದೇಶನ ಪಾಲಿಸದ ಬೆಂಗಳೂರು ಡಿಸಿ

ಬಿಎಂಎಸ್ ಟ್ರಸ್ಟ್‌ನ ಜಮೀನಿನ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ

ಜಿ.ಮಹಾಂತೇಶ್ಜಿ.ಮಹಾಂತೇಶ್25 Feb 2023 8:03 AM IST
share
ಕಂದಾಯ ಇಲಾಖೆಯ ನಿರ್ದೇಶನ ಪಾಲಿಸದ ಬೆಂಗಳೂರು ಡಿಸಿ
ಬಿಎಂಎಸ್ ಟ್ರಸ್ಟ್‌ನ ಜಮೀನಿನ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ

ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಬಿಎಂಎಸ್ ಟ್ರಸ್ಟ್ ಡೀಡ್ ತಿದ್ದುಪಡಿ ಪ್ರಸ್ತಾವ ತಿರಸ್ಕೃತಗೊಳಿಸಿದ್ದರು. ಹಾಲಿ ಬಿಜೆಪಿ ಸರಕಾರದ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ಇದೇ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದರು. ಈ ಕುರಿತು ಕರ್ನಾಟಕ ರಾಷ್ಟ್ರಸಮಿತಿಯು ೨೦೨೨ರ ಅಕ್ಟೋಬರ್ 18ರಂದು  ನೀಡಿದ್ದ ದೂರು ಇದುವರೆಗೂ ಅಪರ ವಿಚಾರಣಾಧಿಕಾರಿ (11) (ILH/@AB/4171/2022) ಬಳಿ ಇರುವುದನ್ನು ಸ್ಮರಿಸಬಹುದು.

ಬೆಂಗಳೂರು: ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್ ಎಜುಕೇಷನಲ್ ಟ್ರಸ್ಟ್  ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ಬೆಂಗಳೂರು ಜಿಲ್ಲಾಧಿಕಾರಿ ಇದುವರೆಗೂ ಪಾಲನೆ ಮಾಡಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.

 ಬಿಎಂಎಸ್ ಶಿಕ್ಷಣ ಟ್ರಸ್ಟ್‌ನ ಡೀಡ್‌ಅನ್ನು ನಿಯಮಬಾಹಿರವಾಗಿ ತಿದ್ದುಪಡಿ ಮಾಡಲಾಗುತ್ತಿದೆ ಎಂಬ ಸಲ್ಲಿಕೆಯಾಗಿದ್ದ ದೂರನ್ನು ಲೋಕಾಯುಕ್ತ ಸಂಸ್ಥೆಯು ವಿಚಾರಣೆಯನ್ನೇ ನಡೆಸದಿರುವುದು ಮತ್ತು ಜಮೀನಿನ ವ್ಯಾಜ್ಯ ಇತ್ಯರ್ಥವಾಗದಿದ್ದರೂ ಬಿಎಂಎಸ್ ಖಾಸಗಿ ವಿಶ್ವವಿದ್ಯಾನಿಲಯ ಮಸೂದೆಗೆ ವಿಧಾನಮಂಡಲವು ಒಪ್ಪಿಗೆ ನೀಡಿರುವ ಹೊತ್ತಿನಲ್ಲಿಯೇ ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವು ಮುನ್ನೆಲೆಗೆ ಬಂದಿದೆ.

 ಬಿಎಂಎಸ್ ಎಜುಕೇಷನ್ ಟ್ರಸ್ಟ್ ಹೊಂದಿರುವ ಜಮೀನಿನ ದಾಖಲೆಗಳ ನೈಜತೆ ಪರಿಶೀಲಿಸಿ ಕಂದಾಯ ಇಲಾಖೆಯ ಸರಕಾರದ ಕಾರ್ಯದರ್ಶಿ ೨೦೨೨ರ ಡಿಸೆಂಬರ್ ೧೨ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು. ಇದರ ಪ್ರತಿಯು ''the-file.in''ಗೆ ಲಭ್ಯವಾಗಿದೆ.

 ‘ಟ್ರಸ್ಟ್ ಹೊಂದಿರುವ ಜಮೀನಿನ ದಾಖಲೆಗಳನ್ನು ಪರಿಶೀಲಿಸಿ ಕ್ರಮಬದ್ಧತೆ ಬಗ್ಗೆ ವರದಿ ನೀಡಬೇಕು. ನೈಜತೆ ಸೇರಿದಂತೆ ಎಲ್ಲಾ ಅಂಶಗಳನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸಿ ಕೂಡಲೇ ದಾಖಲೆ ಮಾಹಿತಿಯೊಂದಿಗೆ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ನೀಡಬೇಕು,’ ಎಂದು ನಿರ್ದೇಶನ ನೀಡಿರುವುದು ಪತ್ರದಿಂದ ಗೊತ್ತಾಗಿದೆ.

ಪತ್ರದಲ್ಲೇನಿದೆ?:

ಬಿ.ಎಂ.ಶ್ರೀನಿವಾಸಯ್ಯ ಎಜುಕೇಷನಲ್ ಟ್ರಸ್ಟ್ ಸಂಸ್ಥೆಯು ಆವಲಹಳ್ಳಿ, ಯಲಹಂಕದಲ್ಲಿ ಹೊಂದಿರುವ 12.25 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಸರಕಾರದಿಂದ ಮಂಜೂರು ಮಾಡಲಾಗಿರುತ್ತದೆ. ಬೆಂಗಳೂರು ನಗರದ ಬಸವನಗುಡಿ ರಸ್ತೆಯಲ್ಲಿರುವ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ೧೫.೩೭೨ ಎಕರೆ ಜಮೀನನ್ನು ಮೈಸೂರು ಸರಕಾರದಿಂದ ಖರೀದಿಸಿದೆ ಹಾಗೂ ಬೆಂಗಳೂರು ಸಿಟಿ ಕಾರ್ಪೊರೇಷನ್‌ನಿಂದ ದಾನವಾಗಿ ಪಡೆದ ಭೂಮಿಯಾಗಿರುತ್ತದೆ ಎಂದು ಹೇಳಿರುವ ಪತ್ರದ ನೈಜತೆ ಮತ್ತು ಕಂದಾಯ ದಾಖಲೆಗಳಲ್ಲಿ ನಮೂದಾಗಿರುವ ವಿವರದೊಂದಿಗೆ ಪರಿಶೀಲಿಸಿ ವಸ್ತುನಿಷ್ಠ ವರದಿ ನೀಡಬೇಕು.  ಸದರಿ ಜಮೀನು ಪ್ರಸ್ತುತ ಸರಕಾರಿ ಜಮೀನು ಭೂಮಿ ಆಗಿಲ್ಲವೆಂಬ ದಾಖಲೆ ಒದಗಿಸಬೇಕು ಎಂದು ಸೂಚಿಸಲಾಗಿದೆ.

 ಆವಲಹಳ್ಳಿ ಯಲಹಂಕದಲ್ಲಿ ಸುಮಾರು ೨೧ ಎಕರೆ ೨೦ ಗುಂಟೆ ಜಮೀನನ್ನು ಹೊಂದಿದ್ದು, ಈ ಜಮೀನಿನಲ್ಲಿ ೧೨.೨೫ ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಸರಕಾರದಿಂದ ಮಂಜೂರು ಮಾಡಿರುವ ಬಗ್ಗೆ ಪರಿಶೀಲಿಸಬೇಕು.  ಬಿ.ಎಂ.ಶ್ರೀನಿವಾಸಯ್ಯ ಎಜುಕೇಷನಲ್ ಟ್ರಸ್ಟ್ ಹೊಂದಿರುವ ೨೭ ಎಕರೆ ಜಮೀನಿನ ಒಡೆತನದ ಬಗ್ಗೆ ಕಂದಾಯ ದಾಖಲೆ ಪರಿಶೀಲಿಸಿ ವರದಿ ನೀಡಬೇಕು ಎಂದು ನಿರ್ದೇಶನ ನೀಡಿರುವುದು ಪತ್ರದಿಂದ ಗೊತ್ತಾಗಿದೆ.

 ಅಂದಾಜು ೨,೦೦೦ ಕೋಟಿ ರೂ.ಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ  ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿಯ  ಟ್ರಸ್ಟ್ ಡೀಡ್ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ಪ್ರಸ್ತಾವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರಸಮಿತಿಯು ೩ ತಿಂಗಳ ಹಿಂದೆಯೇ ನೀಡಿದ್ದ ದೂರು ಲೋಕಾಯುಕ್ತದಲ್ಲಿ ತೆವಳುತ್ತಿರುವ ನಡುವೆಯೇ ರಾಜ್ಯ ಬಿಜೆಪಿ ಸರಕಾರವು ಬಿಎಂಎಸ್ ವಿಶ್ವವಿದ್ಯಾನಿಲಯ ಕಾಯ್ದೆ ೨೦೨೩ ರೂಪಿಸುವ ಉದ್ದೇಶದಿಂದ ತರಾತುರಿಯಲ್ಲಿ ಮಸೂದೆ ಮಂಡಿಸಿರುವುದು ವಿವಾದಕ್ಕೆ ಕಾರಣವಾಗಿತ್ತು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X