Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳಕ್ಕೆ...

ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳಕ್ಕೆ ವಿರೋಧ: ಮಾರ್ಚ್ 1ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಸಿಐಟಿಯು ಕರೆ

25 Feb 2023 6:21 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳಕ್ಕೆ ವಿರೋಧ: ಮಾರ್ಚ್ 1ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಸಿಐಟಿಯು ಕರೆ

ಬೆಂಗಳೂರು, ಫೆ.25: ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿಯನ್ನು ಗರಿಷ್ಟ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಮತ್ತು ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ- 1948ಕ್ಕೆ ತಿದ್ದುಪಡಿ ಮಾಡಿ, ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023ನ್ನು ರಾಜ್ಯ ಸರಕಾರ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ. ಇದು ಕಾರ್ಮಿಕ ವಿರೋಧಿಯಾಗಿದ್ದು, ಚುನಾವಣೆ ಹೊಸ್ತಿಲಲ್ಲಿ ಬಂಡವಾಳಗಾರರನ್ನು ಓಲೈಸುವ ಕ್ರಮವಾಗಿದೆ ಎಂದಿರುವ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್(ಸಿಐಟಿಯು), ಈ ತಿದ್ದುಪಡಿ ವಿಧೇಯಕವನ್ನು ತೀವ್ರವಾಗಿ ವಿರೋಧಿಸಿದೆ.

ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್.‌ ವರಲಕ್ಷ್ಮಿ, ಕೂಡಲೇ ಈ ವಿಧೇಯಕವನ್ನು ಹಿಂಪಡೆಯಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದು, ಸರ್ಕಾರದ ಈ ಕಾರ್ಮಿಕ ವಿರೋಧಿ ವಿಧೇಯಕವನ್ನು ವಿರೋಧಿಸಿ ಮಾರ್ಚ್ 1ರಂದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದರು.

ಪ್ರಸಕ್ತ ಕಾಯ್ದೆಯಲ್ಲಿ ದಿನದ ಕೆಲಸದ ಅವಧಿಯ ಆರಂಭದಿಂದ ಗರಿಷ್ಠ 5 ಗಂಟೆಗೆ 30 ನಿಮಿಷ ವಿರಾಮವನ್ನು ನೀಡಬೇಕು. ಆದರೆ ಈ ತಿದ್ದುಪಡಿ ವಿಧೇಯಕದಲ್ಲಿ ವಿರಾಮವಿಲ್ಲದೆ ದುಡಿಮೆ ಮಾಡುವ ಅವಧಿ ಗರಿಷ್ಠ 5 ಗಂಟೆಯಿಂದ 6 ಗಂಟೆಗೆ ಹೆಚ್ಚಿಸಲಾಗಿದೆ. ಹಾಗೂ ಕಾರ್ಮಿಕರ ದಿನದ ಕೆಲಸದ ಗರಿಷ್ಠ ಅವಧಿ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲಾಗಿದೆ. ಇದು ಕಾರ್ಮಿಕರ ಶೋಷಣೆಗೆ ಮತ್ತಷ್ಟು ಅವಕಾಶ ಕಲ್ಪಿಸಿದ್ದು, ಇದು ಖಂಡನೀಯ ಎಂದು ಹೇಳಿದ್ದಾರೆ.

ಈ ತಿದ್ದುಪಡಿಗಳು ಕಾರ್ಮಿಕರ ಮೇಲೆ ವಿರಾಮವಿಲ್ಲದೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡ, ಶೋಷಣೆ ಹೆಚ್ಚಿಸಲಿದೆ. ಹಲವು ಕಾರ್ಖಾನೆಗಳ ಮಾಲಕರಿಗೆ  6 ದಿನಗಳಲ್ಲಿ ಆಗುತ್ತಿದ್ದ ಉತ್ಪಾದನೆ  4 ದಿನಗಳಲ್ಲೇ ಕಾರ್ಮಿಕರ ಶ್ರಮದ ಶೋಷಣೆಯಿಂದ ಸಿಗಲಿದೆ. ಮೂರು ಶಿಫ್ಟ್ ಗಳಿಗೆ ಒದಗಿಸಬೇಕಾದ ಸಾರಿಗೆ ಸೌಲಭ್ಯ ಹಾಗೂ ಕ್ಯಾಂಟೀನ್ ಮತ್ತು ಇನ್ನಿತರ ಸೌಲಭ್ಯಗಳನ್ನು ಉಳಿಸಲು ಇದು ಅವಕಾಶ ಕಲ್ಪಸುತ್ತದೆ. ಚಾರಿತ್ರಿಕ 8 ಗಂಟೆ ಕೆಲಸ 8 ಗಂಟೆ ವಿರಾಮ ಮತ್ತು 8 ಗಂಟೆ  ಮನೋರಂಜನೆ ಎಂಬ ಜೀವಪರ ತಾತ್ವಿಕ ನೆಲೆಯನ್ನು ಕಳಚಿ ಹಾಕಿ ಬಂಡವಾಳಕ್ಕೆ ಲಾಭ ಮಾಡಿಕೊಡುವ ನವಉದಾರವಾದಿ ಆರ್ಥಿಕ ನೀತಿಯ ಜಾರಿಯ ನಿಟ್ಟಿನಲ್ಲಿ ಬಿಜೆಪಿ ಸರಕಾರವು ಈ ತಿದ್ದುಪಡಿಗೆ ಕ್ರಮ ವಹಿಸಿದೆ.

ದುಡಿಯುವ ಮಹಿಳೆಯರ ಸುರಕ್ಷತೆ, ಕೆಲಸದ ಭದ್ರತೆ, ಸಾರಿಗೆ, ಸೇವಾ ಸೌಲಭ್ಯಗಳಿಂದ ಮಹಿಳಾ ಕಾರ್ಮಿಕರು ವಂಚಿತರಾಗಿದ್ದಾರೆ. ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಕಿರುಕುಳ ಹೆಚ್ಚಾಗಿದೆ. ಕಡಿಮೆ ವೇತನಕ್ಕೆ ದುಡಿಸಿಕೊಳ್ಳಲಾಗುತ್ತಿದ್ದು, ಕೆಲಸದ ಅಭದ್ರತೆಯಿಂದಾಗಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಕಾರ್ಮಿಕರನ್ನು ರಾತ್ರಿಪಾಳಿಯಲ್ಲಿ ದುಡಿಮೆ ಮಾಡಿಕೊಳ್ಳಲು ಕಾರ್ಖಾನೆ ಮಾಲಕರಿಗೆ ಅನುವುಗೊಳಿಸಿ ತಿದ್ದುಪಡಿ ಮಾಡಿರುವುದು ಮಹಿಳಾ ಕಾರ್ಮಿಕರನ್ನು ದುಡಿಮೆಯಿಂದ ಹೊರಗಿಡುವ ಹುನ್ನಾರವಾಗಿದೆ ಎಂದು ಸಿಐಟಿಯು ರಾಜ್ಯ ಸಮಿತಿ ಪ್ರಕಟಿಸಿದೆ.

ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ 2020ರಲ್ಲಿ ಕಾರ್ಮಿಕ ವಿರೋಧಿಯಾಗಿ ಈ ಕಾಯ್ದೆಗೆ ತಿದ್ದುಪಡಿಯನ್ನು ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಮಾಡಿದರು ಕಾರ್ಮಿಕರ ತೀವ್ರ ವಿರೋಧದಿಂದಾಗಿ ವಿಧಾನ ಪರಿಷತ್ತಿನಲ್ಲಿ ಸೋಲಾಗಿತ್ತು. ಈಗ ಬಿಜೆಪಿ ಸರ್ಕಾರ ಚುನಾವಣೆ ಹೊಸ್ತಿಯಲ್ಲಿ ಬಂಡವಾಳಗಾರರ ಲಾಭವನ್ನು ಹೆಚ್ಚಿಸಲು ಈ ತಿದ್ದುಪಡಿ ವಿಧೇಯಕವನ್ನು ಶಾಸನಸಭೆಯಲ್ಲಿ ಅಂಗೀಕಾರ ಮಾಡಿರುವುದು ಕಾರ್ಮಿಕ ವಿರೋಧಿ ನಡೆಯಾಗಿದೆ ಸಿಐಟಿಯು ಹೇಳಿದೆ.

ಕಾರ್ಖಾನೆಗಳಲ್ಲಿ ಹೊಸ ಉದ್ಯೋಗ ಅವಕಾಶಗಳ ಸೃಷ್ಟಿ, ಕಾರ್ಮಿಕರ ಮೇಲೆ ಅಧಿಕ ಉತ್ಪಾದನೆ ಮಾಡಬೇಕೆನ್ನುವ ಒತ್ತಡಗಳನ್ನು ಕಡಿಮೆ ಮಾಡಲು, ಕಾರ್ಮಿಕರ ಜೀವನವನ್ನು ಉತ್ತಮಪಡಿಸಲು 'ವಾರಕ್ಕೆ 5 ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35 ಗಂಟೆ ಕೆಲಸದ ಅವಧಿ' ನಿಗದಿಪಡಿಸಿ ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ಒಳಗೊಂಡಿರುವ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023 ನ್ನು ವಾಪಸ್ಸು ಪಡೆಯಬೇಕೆಂದು ಸಿಐಟಿಯು ಒತ್ತಾಯಿಸಿದೆ.

ಫೆಬ್ರವರಿ 28ರಂದು ಎಲ್ಲಾ ಕಾರ್ಖಾನೆಗಳ ದ್ವಾರದ ಬಳಿ ಕಾರ್ಮಿಕರಿಂದ ವಿಧೇಯಕ ಪ್ರತಿ ದಹನ ಮತ್ತು ಮಾರ್ಚ್ 1ರಂದು ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಿಐಟಿಯು ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X