ಬೆಂಗಳೂರು | ಯುವತಿಯ ಮೊಬೈಲ್ ಕರೆ ಮಾಹಿತಿ ಸಂಗ್ರಹಿಸಿದ ಆರೋಪ: ಮೂವರು ಪೊಲೀಸರ ಅಮಾನತು

ಬೆಂಗಳೂರು, ಫೆ.25: ಯುವತಿಯೊಬ್ಬಳ ಮೊಬೈಲ್ ಫೋನ್ ಕರೆಗಳ ವಿವರಗಳನ್ನು (ಸಿಡಿಆರ್) ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಆರೋಪದಡಿ ಪೊಲೀಸ್ ಇಲಾಖೆಯ ಮೂವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಬೆಂಗಳೂರು ಕೇಂದ್ರ ವಿಭಾಗದ ಸೂಪರಿಂಟೆಂಡೆಂಟ್ ಸುರೇಶ್, ಪೂರ್ವ ವಿಭಾಗದ ತಾಂತ್ರಿಕ ಘಟಕದ ಹೆಡ್ ಕಾನ್‌ಸ್ಟೆಬಲ್ ಸೋಮಶೇಖರ್ ಹಾಗೂ ಕಾನ್‌ಸ್ಟೆಬಲ್ ನಾಗರಾಜ್ ಅಮಾನತಾದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯುವತಿ ನೀಡಿದ್ದ ದೂರಿನಡಿ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು, ಮೂವರ ವಿರುದ್ಧ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ವರದಿ ಸಲ್ಲಿಸಿದ್ದರು. ಅದನ್ನು ಆಧರಿಸಿ ಮೂವರನ್ನೂ ಅಮಾನತುಗೊಳಿಸಿ, ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.
Next Story