Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿಯಿಂದ ಶೀಘ್ರವೇ ರಾಜ್ಯದಲ್ಲಿ 4...

ಬಿಜೆಪಿಯಿಂದ ಶೀಘ್ರವೇ ರಾಜ್ಯದಲ್ಲಿ 4 'ವಿಜಯ ಸಂಕಲ್ಪ ಯಾತ್ರೆ': ಸಿ.ಸಿ.ಪಾಟೀಲ್

25 Feb 2023 12:57 PM IST
share
ಬಿಜೆಪಿಯಿಂದ ಶೀಘ್ರವೇ ರಾಜ್ಯದಲ್ಲಿ 4 ವಿಜಯ ಸಂಕಲ್ಪ ಯಾತ್ರೆ: ಸಿ.ಸಿ.ಪಾಟೀಲ್

ಬೆಂಗಳೂರು: ಚುನಾವಣೆ ಎದುರಿಸಲು ಪಕ್ಷ ಸಿದ್ಧವಾಗಿದೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ 4 ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಾಲ್ಕು ಸ್ಥಳಗಳಿಂದ ಯಾತ್ರೆ ಆರಂಭವಾಗಲಿದೆ. ಮಾರ್ಚ್ 1ರಂದು ಮಲೆಮಹದೇಶ್ವರ ಬೆಟ್ಟ, ಹನೂರು ತಾಲೂಕಿನಿಂದ ಮೊದಲನೇ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಚಾಲನೆ ನೀಡಲಿದ್ದಾರೆ. ಮಾರ್ಚ್ 2ರಂದು ಸಂಗೊಳ್ಳಿ ರಾಯಣ್ಣ ಸ್ಮಾರಕ, ನಂದಗಢದಿಂದ ಯಾತ್ರೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಚಾಲನೆ ಸಿಗಲಿದೆ. ನಂದಗಢದಿಂದ ಹೊರಡುವ ಯಾತ್ರೆಯು ಕಿತ್ತೂರು ಚೆನ್ನಮ್ಮನ ಹುಟ್ಟೂರಾದ ಕಿತ್ತೂರಿಗೂ ಹೋಗಲಿದೆ.

ಮಾರ್ಚ್ 3ರಂದು ನೂತನ ಅನುಭವ ಮಂಟಪ ನಿರ್ಮಾಣವಾಗುತ್ತಿರುವ ಸ್ಥಳ, ಬಸವ ಕಲ್ಯಾಣ, ಬೀದರ್ ಜಿಲ್ಲೆಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದೇವೆ. ಅಲ್ಲದೆ ನಾಡಪ್ರಭು ಕೆಂಪೇಗೌಡ ಪ್ರತಿಮೆ, ದೇವನಹಳ್ಳಿ, ಬೆಂಗಳೂರು. ಈ ಯಾತ್ರೆಗೂ ಕೇಂದ್ರಗೃಹ ಸಚಿವ ಶ್ರೀ ಅಮಿತ್ ಶಾ ಅವರೇ ಚಾಲನೆ ನೀಡಲಿದ್ದಾರೆ.

ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

50ಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಳ್ಳುತ್ತಾರೆ. ರಾಜ್ಯದ ಎಲ್ಲಾ 31 ಜಿಲ್ಲೆಗಳು ಮತ್ತು 224 ವಿಧಾನಸಭಾ ಕ್ಷೇತ್ರಗಳ ಸಂಪರ್ಕ ನಡೆಯಲಿದೆ. ನಾಲ್ಕು ರಥಗಳ ಮೂಲಕ ಒಟ್ಟು 8,000 ಕಿ.ಮೀ. ಯಾತ್ರೆ ಸಂಚರಿಸಲಿದೆ. ಯಾತ್ರೆಯ ಉದ್ದಕ್ಕೂ ಒಟ್ಟು 80ಕ್ಕೂ ಹೆಚ್ಚು ರ್‍ಯಾಲಿ ಮತ್ತು 75 ಸಾರ್ವಜನಿಕ ಸಭೆಗಳು ನಡೆಯಲಿವೆ. 150ಕ್ಕೂ ಹೆಚ್ಚು ರೋಡ್ ಶೋಗಳು ಸಹ ನಡೆಯಲಿವೆ. ಈ ಮೂಲಕ ನಾಡಿನ 4 ಕೋಟಿ ಜನರನ್ನು ಸಂಪರ್ಕಿಸಲಾಗುವುದು. ಯಾತ್ರೆಯ ಅವಧಿ 20 ದಿನಗಳು ಎಂದ ಅವರು, 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಮತ್ತು ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ದಾಖಲೆ ಸೃಷ್ಟಿಸುವುದು ಇದರ ಗುರಿ ಎಂದು ವಿವರಿಸಿದರು.

ಮಾರ್ಚ್ 25ರಂದು ದಾವಣಗೆರೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಮೆಗಾ ರ್‍ಯಾಲಿ ನಡೆಯಲಿದೆ ಎಂದು ತಿಳಿಸಿದರು. ಬಿಜೆಪಿ ಸರಕಾರಗಳ ಸಾಧನೆ, ಕಾಂಗ್ರೆಸ್‍ನ ಹುಸಿ ಭರವಸೆ- ದೇಶ ಕೊಳ್ಳೆ ಹೊಡೆದುದನ್ನು ತಿಳಿಸುತ್ತೇವೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಜಿಲ್ಲಾ ಪ್ರಭಾರಿ ಮತ್ತು ಯಾತ್ರೆಯ ಸಹ ಸಂಚಾಲಕ ಸಚ್ಚಿದಾನಂದಮೂರ್ತಿ ಉಪಸ್ಥಿತರಿದ್ದರು.

share
Next Story
X