ಮಾ.1: ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಮಂಗಳೂರು, ಫೆ.25: ದಿನದ ಕೆಲಸದ ಅವಧಿಯು 3 ಗಂಟೆ ಹೆಚ್ಚಳದ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಆಗ್ರಹಿಸಿ ಕಾರ್ಮಿಕರ ಶೋಷಣೆಗೆ ಹಾಗೂ ಬಂಡವಾಳಗಾರರ ಲಾಭ ಹೆಚ್ಚಳಕ್ಕೆ ಅವಕಾಶ ನೀಡಿದ ರಾಜ್ಯ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ವತಿಯಿಂದ ಪ್ರತಿಭಟನಾ ಪ್ರದರ್ಶನ ಮಾ.1ರಂದು ಬೆಳಗ್ಗೆ 10ಕ್ಕೆ ನಗರದ ಕ್ಲಾಕ್ ಟವರ್ ಬಳಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story