Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ...

ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿ: ಸಿಎಂ ಬೊಮ್ಮಾಯಿ

ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ

25 Feb 2023 10:28 PM IST
share
ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿ: ಸಿಎಂ ಬೊಮ್ಮಾಯಿ
ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ

ಹೊಸದಿಲ್ಲಿ, ಫೆ. 25: ಪೂಜ್ಯರ ಆಶೀರ್ವಾದದೊಂದಿಗೆ ಕರ್ನಾಟಕ ರಾಜ್ಯವನ್ನು ಮುನ್ನಡೆಸುವ ಸಂಕಲ್ಪದಿಂದ ಮುನ್ನೆಡೆಯುತ್ತಿದ್ದೇನೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಸಂಕಲ್ಪ ಯಶಸ್ವಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶನಿವಾರ ದಿಲ್ಲಿ ಕರ್ನಾಟಕ ಸಂಘದ 75 ವರ್ಷದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಟಾಲ್ಕಟೋರ ಸಭಾಂಗಣದಲ್ಲಿ ಆಯೋಜಿಸಿದ ಬಾರಿಸು ಕನ್ನಡ ಡಿಂಡಿಮ ಸಾಂಸ್ಕೃತಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ದೂರದ ದಿಲ್ಲಿಯಲ್ಲಿ ಕನ್ನಡದ ಕಂಪು ಬಹಳ ಅದ್ಭುತವಾಗಿ ಕಾಣಿಸುತ್ತಿದೆ. ನಿಮ್ಮನ್ನೆಲ್ಲ ನೋಡಿ ಬಹಳ ಸಂತಸ ಆಗಿದೆ. ದಿಲ್ಲಿ ಕನ್ನಡ ಸಂಘ ಸ್ಥಾಪನೆಯಾಗಿ 75ನೆ ವರ್ಷದ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದು, ಈ ವೇದಿಕೆ ಮೂಲಕ ಏಳು ಕೋಟಿ ಕನ್ನಡಿಗರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕನ್ನಡ ನಾಡಿನಲ್ಲಿ ಹುಟ್ಟುವುದೇ ಸೌಭಾಗ್ಯ. ಕನ್ನಡ ನಾಡಿನಲ್ಲಿ ಬೆಳೆಯುವುದೇ ನಮ್ಮ ಭಾಗ್ಯ. ಅಂತಹ ಸೌಭಾಗ್ಯ, ಭಾಗ್ಯ ಪಡೆದಿರುವ ನಾವೆಲ್ಲರೂ ಪೂರ್ವ ಜನ್ಮದ ಪುಣ್ಯವಂತರು. ಕನ್ನಡ ನಾಡು ನೈಸರ್ಗಿಕ, ಸಾಂಸ್ಕೃತಿಕ, ಕಾಯಕ, ಅಧ್ಯಾತ್ಮಿಕ, ನೀತಿ ಶ್ರೀಮಂತಿಕೆ ಹಾಗೂ ಜ್ಞಾನ, ತಂತ್ರಜ್ಞಾನ, ತಂತ್ರಾಂಶ ಜ್ಞಾನದಿಂದ ಕೂಡಿರುವುದು ನಮ್ಮ ಕನ್ನಡ ನಾಡು. ಕನ್ಮಡ ನಾಡಿನಲ್ಲಿ ಹುಟ್ಟಿರುವಂತಹ ದಾರ್ಶನಿಕರು ವಿಶ್ವಮಾನ್ಯರು. ನವ ಕನ್ನಡ ನಾಡು ನಿರ್ಮಾಣಕ್ಕೆ ಶ್ರಮಿಸಿದ ಮೈಸೂರು ಮಹಾರಾಜರಿಂದ ಹಿಡಿದು, ವಿಶ್ವೇಶ್ವರಯ್ಯ ಅವರನ್ನೊಳಗೊಂಡ ಎಲ್ಲ ಕಾಯಕ ಯೋಗಿ ಇಂಜಿನಿಯರ್‍ಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.

ನಿಸರ್ಗ ನಮಗೆ ಬಹಳ ಶ್ರೀಮಂತಿಕೆಯನ್ನು ಕೊಟ್ಟಿದೆ. ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು ಇವತ್ತು ಕನ್ನಡ ನಾಡನ್ನು ಕೃಷಿಯಲ್ಲಿ, ಸಂಸ್ಕೃತಿಯಲ್ಲಿ ಶ್ರೀಮಂತ ಮಾಡಿದೆ. ಪ್ರಧಾನಿ ಮೋದಿಯವರ ಐದು ಟ್ರಿಲಿಯನ್ ಡಾಲರ್ ಕನಸಿಗೆ, ಕರ್ನಾಟಕ ಬರುವ ವರ್ಷದಲ್ಲಿ ಒಂದು ಟ್ರಿಲಿಯನ್ ಡಾಲರ್ ನಮ್ಮದು ಖಂಡಿತವಾಗಿಯೂ ಒಂದು ಭಾಗ ಇರುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಕನ್ನಡದ ಸಮಗ್ರತೆ, ಅಖಂಡತೆ ಬಗ್ಗೆ ನಿನ್ನೆಯೇ ಒಂದು ಕಾನೂನು ಪಾಸ್ ಮಾಡಿದ್ದೇವೆ. ಅದೊಂದು ಬಹಳ ಒಳ್ಳೆಯ ಘಳಿಗೆ. ಕೆ.ಸಿ.ರೆಡ್ಡಿಯವರ ಪ್ರತಿಮೆ ಅನಾವರಣ ಮಾಡಿದ್ದೇವೆ ಎಂದ ಅವರು, ಜನವರಿಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಮುಂದಿನ ವರ್ಷ ದಾವಣಗೆರೆಯಲ್ಲಿ ಆಗುವ ವಿಶ್ವ ಕನ್ನಡ ಸಮ್ಮೇಳನಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. 

ಈ ವೇಳೆ ಪ್ರಧಾನಿ ಮೋದಿ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ಉಡುಪಿಯ ವಿಶ್ವೇಶ್ವರ ಪ್ರಸನ್ನ ತೀರ್ಥ ಸ್ವಾಮಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗೆಡೆ, ನಂಜಾವದೂತ ಸ್ವಾಮಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಸುನಿಲ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
Next Story
X