ತಂದೆ ಬೈದಿದ್ದಕ್ಕೆ ಯುವಕ ಆತ್ಮಹತ್ಯೆ

ಬಾಗೇಪಲ್ಲಿ (ಚಿಕ್ಕಬಳ್ಳಾಪುರ), ಫೆ.25: ತಂದೆ ಬೈದರು ಎಂಬ ಕಾರಣಕ್ಕೆ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೂಳೂರು ಹೋಬಳಿ ನರಾವಲಪಲ್ಲಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ತಿಮ್ಮಂಪಲ್ಲಿ ಗ್ರಾಪಂ ವ್ಯಾಪ್ತಿಯ ನರವಾಲಪಲ್ಲಿ ಗ್ರಾಮದ ವೆಂಕಟರಾಮಪ್ಪ ಮತ್ತು ಅಂಜಿನಮ್ಮ ದಂಪತಿಯ ಪುತ್ರ ರವಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.
Next Story





