ಕಾರ್ಕಳ: ವಾಲಿಬಾಲ್ ಆಟವಾಡುತ್ತಿದ್ದಾಗ ಕುಸಿದುಬಿದ್ದು ಯುವಕ ಸಾವು

ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜೋಡುರಸ್ತೆ ಶ್ರೀದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ (ಫೆ. 25ರಂದು) ನಡೆದಿರುವುದಾಗಿ ವರದಿಯಾಗಿದೆ.
ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ಸಂತೋಷ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಫೆ.25ರ ಸಂಜೆ ಎಂದಿನಂತೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸಂತೋಷ್ ಇಲೆಕ್ಟ್ರಿಷನ್ ಕೆಲಸ ನಡೆಸುತ್ತಿದ್ದು, ಇವರಿಗೆ ಕಳೆದ 5 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





