ಫೆ.27: ಉಡುಪಿಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ

ಉಡುಪಿ, ಫೆ.26: ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಸಹ ಉಸ್ತುವಾರಿಯಾಗಿ ನಿಯೋಜನೆ ಗೊಂಡಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಫೆ.27ರ ಬೆಳಗ್ಗೆ 9:30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಲಿದ್ದು, ಉಡುಪಿಯ 5 ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ 5 'ಪ್ರಗತಿ ರಥ'ಗಳಿಗೆ ಚಾಲನೆ ನೀಡಲಿದ್ದಾರೆ.
ಅಪರಾಹ್ನ 3:00 ಗಂಟೆಗೆ ಕಾರ್ಕಳದಲ್ಲಿ ನಡೆಯುವ ಬೃಹತ್ 'ಬೈಕ್ ಜಾಥಾ'ದಲ್ಲಿ ಭಾಗವಹಿಸಿ, ಸಂಜೆ 4:00 ಗಂಟೆಗೆ ಅಜೆಕಾರಿನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ 'ಯುವ ಮೋರ್ಚಾ ಸಮಾವೇಶ'ದಲ್ಲಿ ಭಾಗಿಯಾಗಲಿದ್ದಾರೆ.
ಸಚಿವ ವಿ.ಸುನೀಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕೆ.ಸಿ. ಸಹಿತ ರಾಜ್ಯ ಮತ್ತು ಜಿಲ್ಲಾ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story