ಮಹಿಳಾ ಟಿ-ಟ್ವೆಂಟಿ ವಿಶ್ವಕಪ್ ಫೈನಲ್: ದಕ್ಷಿಣ ಆಫ್ರಿಕಾಗೆ 157 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ

ಕೇಪ್‌ಟೌನ್: ಇಲ್ಲಿನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಣ ಕ್ರಿಕೆಟ್ ಪಂದ್ಯಾಟದಲ್ಲಿ ಆಸ್ಟ್ರೇಲಿಯಾ ತಂಡವು ಆಫ್ರಿಕಾ ತಂಡಕ್ಕೆ 157 ರನ್ ಗಳ ಗುರಿಯನ್ನು ನೀಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೂನಿ ಬಾರಿಸಿದ 74 ರನ್ ಗಳ ನೆರವಿನಿಂದ ಆಸ್ಟ್ರೇಲಿಯಾಕ್ಕೆ ನೆರವಾರದು. ಇನ್ನು, ಗಾಡ್ನರ್ 29 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ಉತ್ತಮ ಪ್ರದರ್ಶನ ತೋರಲಿಲ್ಲ. ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾ ತಂಡ ಆರು ವಿಕೆಟ್ ನಷ್ಟಕ್ಕೆ 156 ರನ್ ಪೇರಿಸಲಷ್ಟೇ ಆಸ್ಟ್ರೇಲಿಯಾ ತಂಡಕ್ಕೆ ಅನುವು ಮಾಡಿಕೊಟ್ಟಿತು.
ದಕ್ಷಿಣ ಆಫ್ರಿಕಾ ಪರ ಶಬ್ನಿಮ್ ಇಸ್ಮಾಯೀಲ್ ಹಾಗೂ ಮರಿಝಾನ್ ಕಪ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.
Next Story