ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಗೆ ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಗೆ ಆಯ್ಕೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರಕ್ರಿಯೆಯ ಮೂಲಕ ಜಿಲ್ಲಾ ಹಾಗೂ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ಮಾರ್ಚ್ 4ರ ಮುಂಚಿತವಾಗಿ ಆಸಕ್ತರು ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್‌ನೊಂದಿಗೆ iycdksm@gmail.comಗೆ ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಜಾಲತಾಣದ ಜಿಲ್ಲಾ ಉಸ್ತುವಾರಿ ಇಸ್ಮಾಯಿಲ್ ಬಿಎಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story