Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಅನಾಚಾರವನ್ನು ಬಹಿರಂಗ ಪಡಿಸಲು...

ಬಿಜೆಪಿ ಅನಾಚಾರವನ್ನು ಬಹಿರಂಗ ಪಡಿಸಲು ಮಾಧ್ಯಮಗಳು ವಿಫಲ: ದಲಿತ ಶೋಷಣೆ ಮುಕ್ತಿ ಮಂಚ್‍ನ ಉಪಾಧ್ಯಕ್ಷೆ ಸುಭಾಷಿಣಿ ಅಲಿ

26 Feb 2023 11:42 PM IST
share
ಬಿಜೆಪಿ ಅನಾಚಾರವನ್ನು ಬಹಿರಂಗ ಪಡಿಸಲು ಮಾಧ್ಯಮಗಳು ವಿಫಲ: ದಲಿತ ಶೋಷಣೆ ಮುಕ್ತಿ ಮಂಚ್‍ನ ಉಪಾಧ್ಯಕ್ಷೆ ಸುಭಾಷಿಣಿ ಅಲಿ

ಬೆಂಗಳೂರು: ‘ದೇಶದಲ್ಲಿ ಬಿಜೆಪಿ ಸರಕಾರ ಮಾಡುತ್ತಿರುವ ಅನಾಚಾರಗಳ ಬಗ್ಗೆ ಮಾಧ್ಯಮಗಳು ಬಹಿರಂಗ ಪಡಿಸುವುದಿಲ್ಲ. ಹಾಗಾಗಿ ಸರಕಾರದ ಜನವಿರೋಧಿ ನೀತಿಗಳ ಕುರಿತು ಸಾರ್ವಜನಿಕರ ನಡುವೆ ಚರ್ಚೆ ಆಗುತ್ತಿಲ್ಲ’ ಎಂದು ದಲಿತ ಶೋಷಣೆ ಮುಕ್ತಿ ಮಂಚ್‍ನ ರಾಷ್ಟ್ರೀಯ ಉಪಾಧ್ಯಕ್ಷೆ ಸುಭಾಷಿಣಿ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ರವಿವಾರ ನಗರದ ಗಾಂಧಿ ಭವನದಲ್ಲಿ ದಲಿತ ಹಕ್ಕುಗಳ ಸಮಿತಿ ವತಿಯಿಂದ ಆಯೋಜಿಸಿದ್ದ ‘ದಲಿತರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಮತ್ತು ಅವರ ಹಕ್ಕುಗಳಿಗಾಗಿ ಒತ್ತಾಯಿಸಿ’ ಎಂಬ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರಕಾರವು ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತಗಳನ್ನು ರದ್ದುಪಡಿಸುವಂತಹ ಅಪಾಯಕಾರಿ ಕೃತ್ಯಕ್ಕೆ ಕೈ ಹಾಕಿದೆ. ಈ ಮೂಲಕ ಬಿಜೆಪಿ ಸಂವಿಧಾನಗಳ ಮೌಲ್ಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ದಲಿತ, ಮುಸ್ಲಿಮ್ ಹಾಗೂ ಶೋಷಿತರಿಗೆ ಆಮಿಷ, ದೌರ್ಜನ್ಯ, ಹಲ್ಲೆಗಳನ್ನು ನಡೆಸಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ನಗರದಲ್ಲಿ ಸುಮಾರು 36 ಸಾವಿರ ದಲಿತ ಹಾಗೂ ಮಸ್ಲಿಮ್ ಸಮುದಾಯದ ಮತಗಳನ್ನು ರದ್ದು ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ಜನತೆಯ ಮೂಲಭೂತ ಹಕ್ಕುಗಳನ್ನು ಒಂದೊಂದಾಗಿ ಕಸಿಯುತ್ತಾ ಬರುತ್ತಿದೆ. ಇದರ ವಿರುದ್ಧ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವಂತಹ ಪ್ರತಿಯೊಬ್ಬ ನಾಗರಿಕರು ಬೀದಿಗಿಳಿದು ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಹಿಂದಿನ ವರ್ಷದ ಉತ್ತರ ಪ್ರದೇಶ ಚುನಾವಣೆಯ ಸಂದರ್ಭದಲ್ಲಿ, ಭದ್ರತಾ ಸಿಬ್ಬಂದಿಗಳನ್ನು ಬಳಸಿಕೊಂಡು ನಿರ್ಧಿಷ್ಟವಾಗಿ ಮುಸ್ಲಿಮ್ ಮತದಾರರಿಗೆ ತಪಾಸಣೆ ನೆಪದಲ್ಲಿ ಭಯಪಡಿಸಲಾಯಿತು. ಅದರ ಮುಂದುವರೆದ ಭಾಗವಾಗಿ ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದಲೇ ಮುಸ್ಲಿಮ್ ಹಾಗೂ ದಲಿತ ಮತದಾರರನ್ನು ಇಲ್ಲವಾಗಿಸುವ ಕೃತ್ಯಕ್ಕೆ ಇಳಿದಿರುವುದರ ಬಗ್ಗೆ ಪ್ರಜ್ಞಾವಂತ ನಾಗರಿಕರು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಅವರು ತಿಳಿಸಿದರು. 

ದೇಶದಲ್ಲಿ ಬೇರು ಬಿಟ್ಟಿರುವ ಮನುವಾದವನ್ನು ಹೋಗಲಾಡಿಸಲು ದಲಿತ, ಕಾರ್ಮಿಕ, ಮಹಿಳಾ ಸಂಘಟನೆಗಳು ಒಂದು ವೇದಿಕೆಯಲ್ಲಿ ಒಗ್ಗೂಡಿ ಐಕ್ಯ ಹೋರಾಟ ರೂಪಿಸಬೇಕು. ಯಾವುದೇ ರೀತಿಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮನುವಾದವನ್ನು ಸೋಲಿಸುವ ನಿಟ್ಟಿನಲ್ಲಿ ಜೊತೆಯಾಗಿ ಸಾಗಬೇಕು. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜನಪರ ಸಂಘಟನೆಗಳು ಒಟ್ಟಾಗಿ ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದು ಅವರು ಕರೆ ನೀಡಿದರು.

ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ.98 ದಲಿತರ ಮೇಲಿನ ಹಲ್ಲೆ ಪ್ರಕರಣಗಳು ಪೊಲೀಸ್ ಸ್ಟೇಷನ್‍ನಲ್ಲೇ ಇತ್ಯಾರ್ಥಿಗೊಂಡು ಆರೋಪಿಗಳು ಕಾನೂನು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಅವರು ಆರೋಪಿಸಿದರು. 

ಸಮಾವೇಶದಲ್ಲಿ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಬಾಲಸುಂದರಂ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನಿತ್ಯಾನಂದ ಸ್ವಾಮಿ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಾ.ಮೋಹನ್‍ರಾಜ್, ಎಸ್ಸಿ, ಎಸ್ಟಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಡಿ.ಶಿವಶಂಕರ್, ಮತ್ತಿತರರು ಉಪಸ್ಥಿತರಿದ್ದರು.

ಮಾ.14ಕ್ಕೆ ನಗರದಲ್ಲಿ ಸಮಾವೇಶ: ದಲಿತರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಮತ್ತು ದಲಿತರ ಹಕ್ಕುಗಳಿಗಾಗಿ ಒತ್ತಾಯಿಸಿ ಮಾ.14ರಂದು ನಗರದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಈ ನಿಟ್ಟನಲ್ಲಿ ರಾಜ್ಯಾದ್ಯಂತ ದಲಿತರ ಮೇಲಿನ ದೌರ್ಜನ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. 
-ಗೋಪಾಲಕೃಷ್ಣ ಹರಳಹಳ್ಳಿ, ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಂಚಾಲಕ 

‘ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೇಲ್ಜಾತಿ ಆರೋಪಿಗಳಿಗೆ ಶಿಕ್ಷೆ ಆಗುವುದಿಲ್ಲ. ಮನುವಾದಿ ಸಿದ್ಧಾಂತದ ಆಧಾರದ ಮೇಲೆ ದೇಶದ ಆಡಳಿತ ನಡೆಯುತ್ತಿರುವುದಕ್ಕೆ ಇದೊಂದು ಸ್ಪಷ್ಟವಾದ ಉದಾಹರಣೆಯಾಗಿದೆ. ಆರೋಪಿಗಳು ಹಾಗೂ ಸಂತ್ರಸ್ಥರು ಯಾವ ಜಾತಿಗೆ ಸೇರಿದವರು ಎಂಬುದರ ಆಧಾರದ ಮೇಲೆ ಶಿಕ್ಷೆ ಪ್ರಕಟವಾಗುತ್ತದೆ. ಮನುಸ್ಮೃತಿಯ ಪ್ರಕಾರ ಬ್ರಾಹ್ಮಣರು, ಕ್ಷತ್ರಿಯರು ದಲಿತರ ಮೇಲೆ ಯಾವುದೇ ಕೃತ್ಯ ಎಸಗಿದರೂ ಶಿಕ್ಷೆಯಿಂದ ವಿನಾಯಿತಿ ಇದೆ. ಅದನ್ನೇ ಬಿಜೆಪಿ ಪಾಲಿಸುತ್ತಾ ಬರುತ್ತಿದೆ’ 
-ಸುಭಾಷಿಣಿ ಅಲಿ, ದಲಿತ ಶೋಷಣೆ ಮುಕ್ತಿ ಮಂಚ್‍ನ ರಾಷ್ಟ್ರೀಯ ಉಪಾಧ್ಯಕ್ಷೆ 

share
Next Story
X