Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.1ರಿಂದ ತುರ್ತು ಸೇವೆ ಹೊರತುಪಡಿಸಿ...

ಮಾ.1ರಿಂದ ತುರ್ತು ಸೇವೆ ಹೊರತುಪಡಿಸಿ ಇತರೆ ಸರಕಾರಿ ಸೇವೆ ಸ್ಥಗಿತ: ದಿನಕರ ಶೆಟ್ಟಿ

ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

27 Feb 2023 6:57 PM IST
share
ಮಾ.1ರಿಂದ ತುರ್ತು ಸೇವೆ ಹೊರತುಪಡಿಸಿ ಇತರೆ ಸರಕಾರಿ ಸೇವೆ ಸ್ಥಗಿತ: ದಿನಕರ ಶೆಟ್ಟಿ
ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ಉಡುಪಿ, ಫೆ.27: ಜಿಲ್ಲೆಯಲ್ಲಿ ಮಾ.1ರಿಂದ ಸರಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲ ಸರಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ತಾಪಂ ಸಭಾಭವನದಲ್ಲಿ ಇಂದು ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಮಾ.1ರಿಂದ ನಡೆಯುವ ನೌಕರರ ಅರ್ನಿಧಿಷ್ಟಾವಧಿ ಮುಷ್ಕರದ ರೂಪುರೇಷೆ ಕುರಿತು ಜಿಲ್ಲೆಯ ಸರಕಾರಿ ನೌಕರರ ವಿವಿಧ ವೃಂದ ಮತ್ತು ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಫೆ.21ರಂದು ಜರಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಆಗ್ರಹಪಡಿಸಿ ಮಾ.1ರಿಂದ  ರಾಜ್ಯದ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.

ರಾಜ್ಯದ 2023-24ನೇ ಸಾಲಿನ ಆಯವ್ಯಯದಲ್ಲಿ ಸರಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಮತ್ತು ಕೇಂದ್ರ ಸರಕಾರಿ ನೌಕರರ ವೇತನದಲ್ಲಿ ಶೇ.25ಕ್ಕೂ ಅಧಿಕ ವ್ಯತ್ಯಾಸವಿದ್ದು ದೇಶದ ಇತರೇ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ಯೆಗಳು ಅತ್ಯಂತ ಕಡಿಮೆ ಇವೆ ಎಂದು ಅವರು ಹೇಳಿದರು.

ನೌಕರರ ಪ್ರಮುಖ ಬೇಡಿಕೆಯಾದ ರಾಜ್ಯ ಸರಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರಿಗೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲು ಶೇ.40 ಫಿಟ್‌ಮೆಂಟ್ ಸೌಲಭ್ಯವನ್ನು ಜು.1ರಿಂದ ಜಾರಿಗೆ ಬರುವಂತೆ ಸರಕಾರಿ ಆದೇಶ ಹೊರಡಿಸುವುದು ಮತ್ತು ರಾಜ್ಯದಲ್ಲಿ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಕುರಿತಂತೆ ಸರಕಾರದಿಂದ ಸ್ಪಷ್ಟ ಆದೇಶ ದೊರೆಯುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದರು.

ಸಭೆಯಲ್ಲಿ ಶಿಕ್ಷಣ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಪದಾಧಿಕಾರಿಗಳು ಮುಷ್ಕರಕ್ಕೆ  ಸಂಪೂರ್ಣವಾಗಿ ಬೆಂಬಲ ನೀಡುವುದರ ಜೊತೆಗೆ ಇಲಾಖೆಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಜಿಲ್ಲೆಯ ಎಲ್ಲಾ ನೌಕರರ ವೃಂದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

‘ಮುಷ್ಕರದ ಸಂದರ್ಭದಲ್ಲಿ ಎಲ್ಲ ನೌಕರರು ಕಚೇರಿಗೆ ಗೈರು ಹಾಜರಾಗಬೇಕು. ಸರಕಾರದ ಯಾವುದೇ ಒತ್ತಡ, ಬೆದರಿಕೆಗಳಿಗೆ ಮಣಿಯದೇ, ಅತ್ಯಂತ ದಿಟ್ಟವಾಗಿ, ಬೇಡಿಕೆಗಳು ಸಂಪೂರ್ಣ ಈಡೇರುವವರೆಗೂ ಮುಷ್ಕರದಲ್ಲಿ  ಪಾಲ್ಗೊಳ್ಳ ಬೇಕು’

-ಅಂಪಾರು ದಿನಕರ ಶೆಟ್ಟಿ, ಅಧ್ಯಕ್ಷರು,
ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘ

share
Next Story
X