Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಕುಗ್ರಾಮದಲ್ಲಿನ ಸರಕಾರಿ...

ಕುಂದಾಪುರ: ಕುಗ್ರಾಮದಲ್ಲಿನ ಸರಕಾರಿ ಶಾಲೆಯ ಅಂದ ಹೆಚ್ಚಿಸಿದ ‘ಬೆಳಕು’ ತಂಡ

27 Feb 2023 2:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಂದಾಪುರ: ಕುಗ್ರಾಮದಲ್ಲಿನ ಸರಕಾರಿ ಶಾಲೆಯ ಅಂದ ಹೆಚ್ಚಿಸಿದ ‘ಬೆಳಕು’ ತಂಡ

ಕುಂದಾಪುರ: ಕುಂದಾಪುರ ತಾಲೂಕಿನ ಕುಗ್ರಾಮವಾಗಿರುವ ಕೊಡ್ಲಾಡಿ ಗ್ರಾಮದ ಮಾರ್ಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಸುಣ್ಣ-ಬಣ್ಣದಿಂದ ಸಿಂಗಾರಗೊಂಡು ನಳನಳಿಸುತ್ತಿದೆ. ಇದಕ್ಕೆಲ್ಲಾ ಕಾರಣವಾಗಿ ರುವುದು ಬೆಂಗಳೂರಿನ ಬೆಳಕು ತಂಡ.

ಬೆಳಕು ತಂಡದ 21 ಮಂದಿ ಸ್ವಯಂ ಸೇವಕರು ಶಾಲೆಯ ಎರಡು ದಿನಗಳ ಕಾಲ ಸೌಂದರ್ಯೀಕರಣದಲ್ಲಿ ತೊಡಗಿಸಿಕೊಂಡರು. ಸುಮಾರು 60 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಶಾಲೆ ಇದಾಗಿದ್ದು ಇಡೀ ಶಾಲೆ ಕಟ್ಟಡದ ಒಳಗೆ ಮತ್ತು ಹೊರಗೆ ಸುಣ್ಣ-ಬಣ್ಣ, ಬೋರ್ಡಿಗೆ ಬಣ್ಣ ಬಳಿಯಲಾಗಿದೆ. ಶಾಲೆ ಎದುರಿನ ಗೋಡೆಗೆ ಶಿಕ್ಷಣ ಹಾಗೂ ಮಾಹಿತಿ ಆಧಾರಿತ ಚಿತ್ರಗಳು. ಹೊರಭಾಗದ ಕಂಪೌಂಡ್ ಹಾಗೂ ಶಾಲಾ ಸ್ವಾಗತ ಗೋಪುರಕ್ಕೆ ಬಣ್ಣ ಬಳಿಯುವ ಮೂಲಕ ಇಡೀ ಶಾಲೆಯ ಅಂದ ಹೆಚ್ಚಿಸಲಾಗಿದೆ.

ಶಾಲೆಯ ಹಳೆ ವಿದ್ಯಾರ್ಥಿ ಸಂದೀಪ್ ಕೊಡ್ಲಾಡಿ ಅವರ ಕೋರಿಕೆಯಂತೆ ಬೆಳಕು ತಂಡ ಆಗಮಿಸಿ ಈ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಈಗಾಗಾಲೇ ಬೆಂಗಳೂರು, ಮಂಡ್ಯ, ಉತ್ತರಕನ್ನಡ ಸಹಿತ 9 ಶಾಲೆಗಳ ಸೌಂದರ್ಯೀಕರಣ ನಡೆದಿದ್ದು ಮಾರ್ಡಿ ಶಾಲೆ ಹತ್ತನೆಯದ್ದಾಗಿದೆ. ತಂಡದ ವಿನಯ್ ಕೆ.ಆರ್.ಪೇಟೆ ಅವರ ಕೆೃಚಳಕದಿಂದ ಗೋಡೆಗಳ ಮೇಲೆ ಸುಂದರ ವಾದ ಚಿತ್ರಗಳು ಮೂಡಿಬಂದವು.

ಇದರ ಸಮಾರೋಪ ಸಮಾರಂಭವು ರವಿವಾರ ಸಂಜೆ ನಡೆಯಿತು. ಸ್ಥಳೀಯರಾದ ಕೊಡ್ಲಾಡಿ ಸುಭಾಷ್ಚಂದ್ರ ಶೆಟ್ಟಿ, ಗ್ರಾಪಂ ಸದಸ್ಯರಾದ ರತ್ನಾಕರ ನಾಯ್ಕ, ಪ್ರವೀಣ್ ಕುಮಾರ್ ಶೆಟ್ಟಿ, ಯೋಗೇಂದ್ರ ನಾಯ್ಕ ಕೊಡ್ಲಾಡಿ, ವಿದ್ಯಾಧರ ಶೆಟ್ಟಿ, ನಿವೃತ್ತ ಯೋಧ ಶಿವರಾಮ ನಾಯ್ಕ, ಉದಯಕುಮಾರ್ ಉಪಸ್ಥಿತರಿದ್ದರು. ಶಾಲೆ ಹಳೆಯ ವಿದ್ಯಾರ್ಥಿ ಸಂದೀಪ್ ಕೊಡ್ಲಾಡಿ ಅವರನ್ನು  ಸನ್ಮಾನಿಸಲಾಯಿತು.

ಮುಖ್ಯೋಪಾಧ್ಯಾಯಿನಿ ಗೌರಿಬಾಯಿ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಂಕರ್ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರ ಗಜೇಂದ್ರ ನಾಯ್ಕ ವಂದಿಸಿದರು. ಶಿಕ್ಷಕ ಗಣೇಶ್ ಸಿ.ಎನ್. ಕಾರ್ಯಕ್ರಮ ನಿರೂಪಿಸಿದರು.

"ಬೆಳಕು ತಂಡ ಮಾಡುವ ಕೆಲಸ ನಾಲ್ಕು ಜನರಿಗೆ ಪ್ರೇರಣೆಯಾಗಬೇಕು ಎಂಬ ನಿಟ್ಟಿನಲ್ಲಿ ’ಪಯಣದ ಹಾದಿಗೆ ಪ್ರೇರಣೆ’ ಎಂಬ ಟ್ಯಾಗ್ ಲೈನ್ ನೀಡಲಾಗಿದ್ದು, ಇಡೀ ತಂಡ ಕುಟುಂಬದಂತೆ ಕೆಲಸ ಮಾಡುತ್ತಿದ್ದೇವೆ. ಡಾ.ವಿಷ್ಣುವರ್ಧನ್, ಪುನೀತ್ ರಾಜಕುಮಾರ್ ಸಹಿತ ಒಳ್ಳೆ ಕೆಲಸ ಮಾಡುವವರು ನಮ್ಮ ಈ ಕಾರ್ಯಕ್ಕೆ ಪ್ರೇರಣೆ. ದುಡಿಮೆಯ ಹಣದಲ್ಲಿ ತಿಂಗಳಿಗೊಮ್ಮೆ ವಿವಿಧ  ರೀತಿ ಯಾದ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತೇವೆ. ಸದಸ್ಯರೆಲ್ಲರ ಕುಟುಂಬ ದವರ ಪ್ರೋತ್ಸಾಹ ಮತ್ತು ಸಹಕಾರವಿದೆ".
-ಶಿವಕುಮಾರ್, ಬೆಳಕು ತಂಡದ ಸದಸ್ಯ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X