ಪಡುಬಿದ್ರೆ: ಕೋಟ್ಪಾ ಕಾಯ್ದೆಯಡಿ 20 ಪ್ರಕರಣ ದಾಖಲು

ಉಡುಪಿ, ಫೆ.27: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಕಾಪು ತಾಲೂಕಿನ ಪಡುಬಿದ್ರೆ ಹಾಗೂ ಇಂಡಸ್ಟ್ರೀಯಲ್ ಏರಿಯಾ ನಂದಿಕೂರು ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 20 ಪ್ರಕರಣ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕಾರ್ಮಿಕ ಇಲಾಖೆಯ ನಿರೀಕ್ಷಕ ವಿಜೇಂದ್ರ ಕೆ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Next Story