ಬಿ.ಸಿ.ರೋಡ್: ಕ್ಯಾಂಟೀನ್ ಗೆ ಬೆಂಕಿ, ಸೊತ್ತುಗಳು ಅಗ್ನಿಗಾಹುತಿ

ಬಂಟ್ವಾಳ, ಫೆ 27 : ಬಿ.ಸಿ.ರೋಡಿನ ಹೃದಯ ಭಾಗದಲ್ಲಿರುವ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸೊತ್ತುಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ.
ಇಲ್ಲಿನ ಬಸ್ ನಿಲ್ದಾಣ ಬಳಿಯ ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸಾರ್ವಜನಿಕರು ಬೆಂಕಿ ನಂದಿಸಿದ್ದಾರೆ, ಅಗ್ನಿಶಾಮಕ ದಳದವರೂ ಸ್ಥಳಕ್ಕಾಗಮಿಸಿದ್ದು ಕಾರ್ಯಾಚರಣೆ ನಡೆಸಿದರು. ಘಟನೆಯಲ್ಲಿ ಅಪಾರ ಪ್ರಮಾಣದ ಸೊತ್ತುಗಳು ನಾಶವಾಗಿದೆ ಎಂದು ತಿಳಿದುಬಂದಿದೆ.
Next Story