ಪಿ.ಎಂ.ಕಿಸಾನ್ ಯೋಜನೆ: ದ.ಕ.ಜಿಲ್ಲೆಯ 1,39,571 ಫಲಾನುಭವಿಗಳಿಗೆ ನೆರವು

ಮಂಗಳೂರು, ಫೆ.27: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲೆಯ 1,39,571 ಫಲಾನುಭವಿಗಳಿಗೆ 27.91 ಕೋ.ರೂ.ಗಳನ್ನು ಆನ್‌ಲೈನ್ ಮೂಲಕ ಬಿಡುಗಡೆ ಮಾಡಿದರು.
ಈ ಕಾರ್ಯಕ್ರಮದ ನೇರ ಪ್ರಸಾರವನ್ನು ನಗರದ ಎಕ್ಕೂರಿನಲ್ಲಿರುವ ಮೀನುಗಾರಿಕಾ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ, ಕೆವಿಕೆಯ ಮುಖ್ಯಸ್ಥ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲೂ ಆಯೋಜಿಸಲಾಗಿತ್ತು.
Next Story





