Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ...

ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ ಬಿಜೆಪಿಗೆ ಅಧಿಕಾರ: ಮತದಾನೋತ್ತರ ಸಮೀಕ್ಷೆ

27 Feb 2023 10:56 PM IST
share
ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ ಬಿಜೆಪಿಗೆ ಅಧಿಕಾರ: ಮತದಾನೋತ್ತರ ಸಮೀಕ್ಷೆ

ಹೊಸದಿಲ್ಲಿ, ಫೆ. 27: ಬಿಜೆಪಿಯು ತ್ರಿಪುರಾದಲ್ಲಿ ಸುಲಭವಾಗಿ ಬಹುಮತ ಗಳಿಸಲಿದೆ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಿತ್ರಕೂಟವು ಅಧಿಕಾರಕ್ಕೆ ಬರಲಿದೆ ಎಂದು ಮತದಾನೋತ್ತರ ಸಮೀಕ್ಷೆಗಳು ಊಹಿಸಿವೆ. ಮೇಘಾಲಯದಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಕೋನ್ರಾಡ್ ಸಂಗ್ಮಾರ ಎನ್ಪಿಪಿ (ನ್ಯಾಶನಲ್ ಪೀಪಲ್ಸ್ ಪಾರ್ಟಿ) ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ.

ಎರಡು ಮತದಾನೋತ್ತರ ಸಮೀಕ್ಷೆಗಳ ಸಾರದ ಪ್ರಕಾರ, ತ್ರಿಪುರಾದಲ್ಲಿ ಬಿಜೆಪಿಯು 35 ಸ್ಥಾನಗಳನ್ನು ಪಡೆಯಬಹುದಾಗಿದೆ. 60 ಸ್ಥಾನಗಳ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ. ರಾಜ್ಯವನ್ನು 30 ವರ್ಷಗಳಿಗೂ ಅಧಿಕ ಸಮಯ ಆಳಿದ್ದ ಎಡ ಪಕ್ಷಗಳು ಈ ಬಾರಿ ಕೇವಲ 12 ಸ್ಥಾನಗಳನ್ನು ಗಳಿಸಬಹುದಾಗಿದೆ. ಎಡಪಕ್ಷಗಳ ಮಿತ್ರಪಕ್ಷ ಕಾಂಗ್ರೆಸ್ ಯಾವುದೇ ಸ್ಥಾನವನ್ನು ಗೆಲ್ಲುವ ನಿರೀಕ್ಷೆಯಿಲ್ಲ ಎಂದು ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ.

ರಾಜವಂಶದ ಕುಡಿ ಪ್ರದ್ಯೋತ್ ಕಿಶೋರ್ ದೇವವರ್ಮ(Kishore Dev Varma) ಸ್ಥಾಪಿಸಿರುವ ನೂತನ ಪಕ್ಷ ತಿಪ್ರಾ ಮೋತ 12 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ನಾಗಾಲ್ಯಾಂಡ್ ನಲ್ಲಿ ಬಿಜೆಪಿ-ಎನ್ಡಿಪಿಪಿ (ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸಿವ್ ಪಾರ್ಟಿ) ಮಿತ್ರಕೂಟವು ಒಟ್ಟು 60 ಸ್ಥಾನಗಳ ಪೈಕಿ 35-43 ಸ್ಥಾನಗಳನ್ನು ಗೆಲ್ಲಬಹುದಾಗಿದೆ ಎಂದು ಝೀನ್ಯೂಸ್-ಮ್ಯಾಟ್ರೈಝ್ ಅಂದಾಜಿಸಿದೆ.

ಮೇಘಾಲಯದಲ್ಲಿ, ಕೋನ್ರಾಡ್ ಸಂಗ್ಮಾರ ಎನ್ಪಿಪಿ 21-26 ಸ್ಥಾನಗಳೊಂದಿಗೆ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಎಂದು ಝೀನ್ಯೂಸ್-ಮ್ಯಾಟ್ರೈಝ್ ಹೇಳಿದೆ. 2018ರ ಚುನಾವಣೆಯಲ್ಲಿ, ಕೇವಲ 2 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈ ಬಾರಿ 6-11 ಸ್ಥಾನಗಳನ್ನು ಪಡೆಯಬಹುದು ಎಂದು ಅದು ನಿರೀಕ್ಷಿಸಿದೆ. ಹೊಸದಾಗಿ ಪ್ರವೇಶ ಪಡೆದಿರುವ ತೃಣಮೂಲ ಕಾಂಗ್ರೆಸ್ 8-13 ಸ್ಥಾನಗಳನ್ನು ಗಳಿಸಬಹುದಾಗಿದೆ.

ಎಲ್ಲಾ ಮೂರು ರಾಜ್ಯಗಳ ಮತಗಳ ಎಣಿಕೆ ಗುರುವಾರ ನಡೆಯಲಿದೆ.

share
Next Story
X